ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಇಎಸ್‌ಐಸಿ ಪ್ರಾಯೋಗಿಕಕಾರ್ಯಾಚರಣೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಶಹಾಬಾದ್‌ ಇಎಸ್‌ಐಸಿ ಆಸ್ಪತ್ರೆಯಲ್ಲಿ ಗ್ಯಾಸ್‌ ಪೈಪ್‌ಲೈನ್ ಸೇರಿದಂತೆ ಬಹುತೇಕ ಕಾರ್ಯ ಪೂರ್ಣಗೊಂಡಿದ್ದು ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚನೆ ನೀಡಿದರು.

ಶಹಾಬಾದ್‌ನಲ್ಲಿ ನವೀಕರಿಸಲಾದ ಇಎಸ್‌ಐಸಿ ಆಸ್ಪತ್ರೆಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದ ಅವರು, ‘ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳ ಇಂಡೆಂಟ್ ಸಲ್ಲಿಸಬೇಕು. ಅದರ ಜೊತೆಗೆ ಅಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯ ವಿವರ ಸಹ ನೀಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರದೀಪ ಪವಾರ ಅವರಿಗೆ ಸೂಚನೆ ನೀಡಿದರು.

ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಬೇಕು. ತ್ವರಿತಗತಿಯಲ್ಲಿ ಕಾರ್ಯಗಳು ನಡೆಯಬೇಕು ಎಂದು ಅವರು ತಿಳಿಸಿದರು.

‘ನೀರು, ವಿದ್ಯುತ್‌ ವ್ಯವಸ್ಥೆ ಸೇರಿದಂತೆ ರಿದಂತೆ ಬಹುತೇಕ ಸಿವಿಲ್ ಕಾಮಗಾರಿ ಪೂರ್ಣಗೊಂಡಿವೆ’ ಎಂದು ಸೇಡಂ ಉಪವಿಭಾಗದ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಕೃಷ್ಣ ಅಗ್ನಿಹೋತ್ರಿ ವಿವರಿಸಿದರು.

ತಹಶೀಲ್ದಾರ್‌ ಸುರೇಶ ವರ್ಮಾ, ನಗರಸಭೆಯ ಆಯುಕ್ತ ಕೆ.ಗುರುಲಿಂಗಪ್ಪ, ಲೊಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅಣ್ಣಪ್ಪ ಕುದ್ರಿ, ಸಹಾಯಕ ಎಂಜಿನಿಯರ್‌ ಜಗನ್ನಾಥ ಮಾಳಗೆ ಮತ್ತು ಇತರ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.