ಶುಕ್ರವಾರ, ಮಾರ್ಚ್ 31, 2023
22 °C
ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಒಂದು ವಾರದಲ್ಲಿ ನೆರೆ ರಾಜ್ಯಗಳಿಗೆ ಬಸ್ ಸಂಚಾರ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಆಂಧ್ರಪ್ರದೇಶಕ್ಕೆ ಶೀಘ್ರವೇ ಬಸ್ ಸಂಚಾರ ಶುರುವಾಗಲಿದ್ದು, ಮುಂದಿನ ಒಂದು ವಾರದಲ್ಲಿ ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಟಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು–ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಕೇರಳ,‌ ತೆಲಂಗಾಣ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ. ಈಗ ಆಂ‌ಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ವಿವರಿಸಿದರು.

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ನಿತ್ಯ ಒಂದು ಕೋಟಿ ಜನ ಸಂಚರಿಸುತ್ತಿದ್ದರು. ಆದರೆ ಅದರಲ್ಲಿ ಕೇವಲ ಶೇ 35ರಿಂದ 40ರಷ್ಟು ಮಾತ್ರ ಜನ ಪ್ರಯಾಣಿಸುತ್ತಿದ್ದಾರೆ. ಕೊರೊನಾದಿಂದ ಹೆಚ್ಚಿಗೆ ನಷ್ಟ ಸಂಭವಿಸಿರುವ ಸರ್ಕಾರಿ ಸಂಸ್ಥೆಗಳ ಪೈಕಿ ಸಾರಿಗೆ ಸಂಸ್ಥೆ ಮುಂಚೂಣಿಯಲ್ಲಿದೆ. ನಾಲ್ಕೂ ನಿಗಮಗಳಿಂದ ₹ 2760 ಕೋಟಿ ನಷ್ಟವಾಗಿದೆ. ದಿನಾಲು ₹ 1.5 ಕೋಟಿ ನಷ್ಟವಾಗಿದೆ. ಈಗ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸವದಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು