ಮಂಗಳವಾರ, ಸೆಪ್ಟೆಂಬರ್ 21, 2021
28 °C

ಜೇವರ್ಗಿ, ಯಡ್ರಾಮಿ: ಅಪರಿಚಿತ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಳ್ಳುಂಡಗಿ ಸೀಮಾಂತರದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಮಂಗಳವಾರ ಪತ್ತೆಯಾಗಿದೆ.

ಸ್ಥಳಕ್ಕೆ ನೆಲೋಗಿ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಮಲ್ಲಣ್ಣ ಯಲಗೋಡ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಮತ್ತೊಂದೆಡೆ ಯಡ್ರಾಮಿ ತಾಲ್ಲೂಕಿನ ಆಲೂರ ಗ್ರಾಮದ ಹತ್ತಿರವಿರುವ ಕೃಷ್ಣಾ ಭಾಗ್ಯ ಜಲ ನಿಗಮದ ಜೇವರ್ಗಿ ಶಾಖಾ ಕಾಲುವೆಯಲ್ಲಿ ಮಂಗಳವಾರ ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಕಳೆದ ಒಂದು ವಾರದ ಹಿಂದೆ ಮೃತಪಟ್ಟಿರಬಹುದು ಎಂದು ಯಡ್ರಾಮಿ ಠಾಣೆಯ ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಯಡ್ರಾಮಿ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಗಜಾನಂದ ಬಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಜೇವರ್ಗಿ ತಾಲ್ಲೂಕಿನ ನರಿಬೋಳ ಮತ್ತು ರಾಜವಾಳ ಗ್ರಾಮದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಗಳ ಎರಡು ಶವಗಳು ಪತ್ತೆಯಾಗಿದ್ದವು. ಕಳೆದ ಒಂದು ತಿಂಗಳಲ್ಲಿ ತಾಲ್ಲೂಕಿನ ಭೀಮಾ ನದಿಯಲ್ಲಿ ಮೂರು ಹಾಗೂ ಯಡ್ರಾಮಿ ತಾಲ್ಲೂಕಿನ ಆಲೂರ ಸೀಮಾಂತರದ ಜೇವರ್ಗಿ ಶಾಖಾ ಕಾಲುವೆಯಲ್ಲಿ ಒಂದು ಅಪರಿಚಿತ ಶವ ಪತ್ತೆಯಾಗಿವೆ. ಈ ಕುರಿತು ಮಾಹಿತಿ ಪಡೆಯಲು ಸಿಪಿಐ ರಮೇಶ ರೊಟ್ಟಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.