ಮಂಗಳವಾರ, ಆಗಸ್ಟ್ 3, 2021
21 °C

ಬಾಬುರಾವ ದೇಶಮಾನ್ಯೆ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಜೇವರ್ಗಿ ತಾಲ್ಲೂಕಿನ ಕೋಬಾಳ ಗ್ರಾಮದ ಬಾಬುರಾವ ಶಂಕರರಾವ ದೇಶಮಾನ್ಯೆ (102) ಶುಕ್ರವಾರ ನಗರದಲ್ಲಿ ನಿಧನರಾದರು.

60 ವರ್ಷಗಳ ಹಿಂದೆ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ತಮ್ಮ 7 ಪುತ್ರಿಯರಿಗೆ ಮತ್ತು ಒಬ್ಬ ಪುತ್ರನಿಗೆ ಉನ್ನತ ಶಿಕ್ಷಣ ಕೊಡಿಸಿದ್ದರು. 19ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕ್ಕಿದ್ದರು. ಆರ್ಯ ಸಮಾಜದ ಸಕ್ರಿಯ ಸದಸ್ಯರಾಗಿದ್ದಲ್ಲದೇ, ನಂತರ ಎಡಪಂಥೀಯ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.

ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11ಕ್ಕೆ ಕಲಬುರ್ಗಿಯ ಮುತ್ಯಾನ ಬಬಲಾದ ಗ್ರಾಮದ ಬಳಿಯ ಹೊಲದಲ್ಲಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು