ಕಲಬುರಗಿ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಅಫಜಲಪುರ ತಾಲ್ಲೂಕಿನ ಬಾಣಂತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.

ಅಫಜಲಪುರ ತಾಲ್ಲೂಕಿನ ಹವಳಗಾ ಗ್ರಾಮದ ಭಾಗ್ಯಶ್ರೀ ಶಿವಾಜಿ (22) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಭಾಗ್ಯಶ್ರೀ ಅವರನ್ನು ಸೋಮವಾರ ಮಧ್ಯಾಹ್ನ ಅಫಜಲಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದರು. ಆ ಬಳಿಕ ರಕ್ತದೊತ್ತಡ ಕಡಿಮೆಯಾಯಿತು. ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷವೇ ಬಾಣಂತಿ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
.ಬಾಣಂತಿಯರ ಸಾವು ಸರ್ಕಾರಿ ಆಸ್ಪತ್ರೆಗಳ ದುಃಸ್ಥಿತಿಗೆ ಕನ್ನಡಿ:ಬರಗೂರು ರಾಮಚಂದ್ರಪ್ಪ.ಬಾಣಂತಿಯರ ಸಾವು | ₹5 ಲಕ್ಷ ಪರಿಹಾರ ಒಪ್ಪತಕ್ಕದ್ದಲ್ಲ: ನಾಗಲಕ್ಷ್ಮೀ ಚೌದರಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.