ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

121 ಗ್ರಂಥಗಳ ಲೋಕಾರ್ಪಣೆ ಸಮಾರಂಭ 17ರಂದು

Published 14 ಮಾರ್ಚ್ 2024, 15:06 IST
Last Updated 14 ಮಾರ್ಚ್ 2024, 15:06 IST
ಅಕ್ಷರ ಗಾತ್ರ

ಕಲಬುರಗಿ: ‘ಸಿದ್ಧಲಿಂಗೇಶ್ವರ ಬುಕ್ ಡಿಪೊ ಮತ್ತು ಪ್ರಕಾಶನ, ಬಸವ ಪ್ರಕಾಶನ ಹಾಗೂ ಸಿದ್ಧಲಿಂಗೇಶ್ವರ ಪ್ರಕಾಶನ ವಾರ್ಷಿಕೋತ್ಸವ ಹಾಗೂ 121 ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಮಾರ್ಚ್ 17ರಂದು ಸಂಜೆ 5.30ಕ್ಕೆ ನಗರದ ಛೇಂಬರ್ ಆಫ್ ಕಾಮರ್ಸ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಬಸವರಾಜ ಕೊನೇಕ ಹೇಳಿದರು.

ನಗರದ ಸಿದ್ಧಲಿಂಗೇಶ್ವರ ಬುಕ್‌ಡಿಪೊದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ನಡೆಯುವ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರದ ಸ್ವಾಮೀಜಿ ಗ್ರಂಥಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ’ ಎಂದು ಹೇಳಿದರು.

‘ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್‌ ದಾಕ್ಷಾಯಿಣಿ ಎಸ್. ಅಪ್ಪ ನೇತೃತ್ವ ವಹಿಸಲಿದ್ದಾರೆ. ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಹೇಳಿದರು.

‘ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸರ್ಕಾರ, ಸಂಘ–ಸಂಸ್ಥೆಗಳಿಂದ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ಸಲಹಾ ಸಮಿತಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ’ ಎಂದು ಹೇಳಿದರು.

ಸಿದ್ಧಲಿಂಗೇಶ್ವರ ಪ್ರಕಾಶನದ ಸಿದ್ಧಲಿಂಗ ಬಿ. ಕೊನೇಕ, ಶರಣು ಬಿ. ಕೊನೇಕ, ಸಲಹಾ ಸಮಿತಿ ಸದಸ್ಯರಾದ ಸ್ವಾಮಿರಾವ ಕುಲಕರ್ಣಿ, ಗವಿಸಿದ್ದಪ್ಪ ಪಾಟೀಲ, ಶಿವರಾಜ ಪಾಟೀಲ, ಚಿ.ಸಿ. ಲಿಂಗಣ್ಣ, ಶರಣಬಸಪ್ಪ ವಡ್ಡನಕೇರಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT