ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

7

ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Published:
Updated:

ಕಲಬುರ್ಗಿ: ವಿಜಯ ನಗರ, ಬಸವ ನಗರ ಮತ್ತು ಜಿಲಾನಾಬಾದ್ ಬಡಾವಣೆಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕನ್ನಡ ಭೂಮಿ ಜಾಗೃತಿ ಸಮಿತಿ ಸದಸ್ಯರು ಮಹಾನಗರ ಪಾಲಿಕೆ ಎದುರು ಮಂಗಳವಾರ ಪ್ರತಿಭಟನೆ ಮಾಡಿದರು.

ಕುಡಿಯುವ ನೀರು, ಒಳಚರಂಡಿ ಮತ್ತು ತೆರೆದ ಚರಂಡಿ ವ್ಯವಸ್ಥೆ ಒದಗಿಸಬೇಕು. ಬೀದಿ ದೀಪಗಳನ್ನು ದುರಸ್ತಿಪಡಿಸಬೇಕು. ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಮಳೆ ನೀರು ಮನೆಯೊಳಗೆ ನುಗ್ಗುತ್ತಿದ್ದು, ನಿವಾಸಿಗಳು ಬವಣೆ ಪಡುವಂತಾಗಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೇಲ್ಮಟ್ಟದ ನೀರಿನ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು ಬೀಳುವಂತಿದೆ. ಇದರಿಂದ ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಆದ್ದರಿಂದ ಆ ಟ್ಯಾಂಕ್ ಅನ್ನು ನೆಲಸಮಗೊಳಿಸಿ, ಹೊಸದಾಗಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ವಿಭಾಗೀಯ ಅಧ್ಯಕ್ಷ ಜೈರಾಜ್ ಕಿಣಿಗೀಕರ್, ಕಾರ್ಯದರ್ಶಿ ಗುರುಲಿಂಗಪ್ಪ ಟೆಂಗಳಿ, ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ರೇವೂರ, ಶ್ರೀಕಾಂತ ನಾಗಶೆಟ್ಟಿ, ಡಾ.ಖಾಜಾಮಿಯಾ, ಆಸೀಫ್ ಮಟಕಿ, ನಾಗರಾಜ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !