ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

7

ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

Published:
Updated:

ಕಲಬುರ್ಗಿ: ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಶ್ರೀರಾಮ ಸೇನಾ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಿದರು.

ಅಸ್ಸಾಂ ರಾಜ್ಯದಲ್ಲಿ ನಡೆದ ಪೌರತ್ವ ನೋಂದಣಿ ಅಭಿಯಾನದಲ್ಲಿ 40 ಲಕ್ಷಕ್ಕೂ ಅಧಿಕ ಬಾಂಗ್ಲಾ ನುಸುಳುಕೋರರು ಇರುವುದು ಪತ್ತೆಯಾಗಿದೆ. ಅಸ್ಸಾಂ ಅಷ್ಟೇ ಅಲ್ಲದೆ ದೇಶದಾದ್ಯಂತ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಆಂತರಿಕ ಭದ್ರತೆ, ಸಾಮಾಜಿಕ, ಆರ್ಥಿಕ, ರಾಜಕೀಯ ದೃಷ್ಟಿಯಿಂದ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ವಲಸಿಗರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ ಎಸ್.ಸ್ವಾದಿ, ಕಾರ್ಯದರ್ಶಿ ಗುಂಡು ಪಾಟೀಲ, ಪದಾಧಿಕಾರಿಗಳಾದ ಆನಂದ ಹಿರೇಗೌಡರ, ಶಶಿಕಾಂತ ಆರ್.ದೀಕ್ಷಿತ್, ಸಂತೋಷ ಸುನಾವಣೆ, ಶೀವರಾಜ ಪಾಟೀಲ, ಶರಣು ಗೊಬ್ಬೂರ, ಮಹೇಶ ಗೊಬ್ಬೂರ, ಸಂತೋಷ ಬೆನಕನಹಳ್ಳ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !