ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಆಗ್ರಹ

Published 3 ನವೆಂಬರ್ 2023, 14:43 IST
Last Updated 3 ನವೆಂಬರ್ 2023, 14:43 IST
ಅಕ್ಷರ ಗಾತ್ರ

ಕಲಬುರಗಿ: ‘ನನ್ನ ಖರೀದಿಸುವ ಶಕ್ತಿ ಯಾರಿಗೂ ಇಲ್ಲ. ನನ್ನ ರೇಟ್ ಬೇರೆಯೇ ಇದೆ ಎಂದು ಹೇಳುವ ಮೂಲಕ ಶಾಸಕ ಸ್ಥಾನವನ್ನು ಮಾರಾಟಕ್ಕೆ ಇಟ್ಟ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಂಸ್ಥಾಪಕ ರಮೇಶ ದುತ್ತರಗಿ ಆಗ್ರಹಿಸಿದ್ದಾರೆ.

ಈ ಸಂಬಂಧ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿರುವ ಅವರು, ‘ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ರಾಜ್ಯವನ್ನು ನನ್ನ ಹೆಸರಿಗೆ ಬರೆದುಕೊಟ್ಟರೆ ಹೋಗುತ್ತೇನೆ ಎಂದು ಶಾಸಕರು ಹೇಳಿದ್ದಾರೆ. ರಾಜ್ಯ ಯಾರ ಆಸ್ತಿಯೂ ಅಲ್ಲ. ಏಳು ಕೋಟಿ ಕನ್ನಡಿಗರ ಆಸ್ತಿಯಾಗಿದೆ’ ಎಂದು ಹೇಳಿದ್ದಾರೆ.

‘ಶಾಸಕ ಕೊತ್ತೂರು ಮಂಜುನಾಥ್ ಅವರು ನನ್ನ ರೇಟ್ ಬೇರೆಯೇ ಇದೆ ಎನ್ನುವ ಮೂಲಕ ಕೋಲಾರ ಕ್ಷೇತ್ರದ ಮತದಾರರನ್ನು ಹಾಗೂ ಪ್ರಜಾಪ್ರಭುತ್ವವನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT