ಶಹಾಬಾದ್: ಸೆ.19 ರಂದು ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನವನ್ನು ಪ.ಜಾ. ಬಲಗೈ ಸಮುದಾಯಕ್ಕೆ ನೀಡಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ ನಾಗರಾಜ ಸಿಂಘೆ ಒತ್ತಾಯಿಸಿದ್ದಾರೆ.

ಈ ಕುರಿತು ಮಂಗಳವಾರ ಸಂಜೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ, ನಗರಸಭೆ ಎದುರು ಇರುವ ಡಾ.ಅಂಬೇಡ್ಕರ್ ಪುತ್ಥಳಿ ಬಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಕಳೆದ ಬಾರಿ ಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಇದ್ದುದರಿಂದ, ಈ ಬಾರಿ ಅಧ್ಯಕ್ಷ ಸ್ಥಾನ ಎಸ್‌ಸಿ ಮೀಸಲಾಗಿದ್ದು, ಕಳೆದ ಬಾರಿ ಎರಡು ಸ್ಥಾನ ಮಹಿಳೆಯರಿಗೆ ಕೊಟ್ಟಿದ್ದರಿಂದ ಈ ಬಾರಿ ಎಸ್‌ಸಿ ಬಲಗೈ ಸಮುದಾಯದ ನಾಗರಾಜ ಕರಣಿಕ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಪೂಜಪ್ಪ ಮೇತ್ರೆ, ಕರಾದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಪ್ಪ ಕರಣಿಕ ಮಾತನಾಡಿದರು. ಮುಖಂಡರಾದ ಮಲ್ಲಿಕಾರ್ಜುನ ಕಟ್ಟಿ, ಬಸವರಾಜ ಮಯೂರ, ಸ್ನೇಹಲ್ ಜಾಯಿ, ಮಲ್ಲಿಕಾರ್ಜುನ ಜಲಂಧರ, ನರಸಿಂಹಲು ರಾಯಚೂರಕರ, ಪ್ರವೀನ ರಾಜನ್, ಭೀಮಾಶಂಕರ ಕಾಂಬಳೆ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.