ಕಲಬುರಗಿ: ಚಿಂಚೋಳಿಯಲ್ಲಿನ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಡೆತನದ ಸಿದ್ಧಸಿರಿ ಸಕ್ಕರೆ ಮತ್ತು ಎಥೆನಾಲ್ ಕಾರ್ಖಾನೆಗೆ ಕಬ್ಬು ನುರಿಸಲು ಅನುಮತಿ ಕೊಡುವಂತೆ ಆಗ್ರಹಿಸಿ ರೈತ ಹೋರಾಟಗಾರರು ಮತ್ತು ಬಿಜೆಪಿ ಮುಖಂಡರು ಸಾರ್ವಜನಿಕ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ನಗರಕ್ಕೆ ಬಂದಿದ್ದಾರೆ. ಸರ್ಕಾರದ ಗಮನ ಸೆಳೆಯಲು ನೂರಾರು ರೈತರೊಂದಿಗೆ ಬಿಜೆಪಿ ಮುಖಂಡರು ಸೇರಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಶಾಸಕರಾದ ಅವಿನಾಶ ಜಾಧವ, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಮಾಜಿ ಸದಸ್ಯ ಅಮರನಾಥ ಪಾಟೀಲ, ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಗಿ, ಚಂದು ಪಾಟೀಲ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು