ಗುರುವಾರ , ಫೆಬ್ರವರಿ 25, 2021
29 °C
ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಮಹತ್ವದ ಸಭೆ

ಸೇಡಂ ಜಿಲ್ಲಾ ರಚನೆ: ಹೋರಾಟ ಸಮಿತಿ ರಚಿಸಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೇಡಂ: ಸೇಡಂನ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಭಾನುವಾರ ಮಠಾಧೀಶರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೇಡಂ ಜಿಲ್ಲಾ ರಚನಾ ಸಮಿತಿ ರಚಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಸೇಡಂನ ಮಠಾಧೀಶರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಕೀಯ ಗಣ್ಯರು, ಹಿರಿಯ ಮುಖಂಡರು, ಸಾಹಿತಿಗಳು, ಸಂಘಟನೆಗಳು ಪ್ರಮುಖರು, ವ್ಯಾಪಾರಸ್ಥರು, ರೈತರು ಹಾಗೂ ವಿವಿಧ ಸಮಾಜಗಳ ಮುಖಂಡರು ಪಾಲ್ಗೊಂಡು ಜಿಲ್ಲಾ ರಚನೆಗೆ ಬೇಕಾದ ಸಲಹೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕೆಲವರು ಕಾನೂನಾತ್ಮಕವಾಗಿ ಹೋರಾಟದ ಕುರಿತು ನಿರ್ಧರಿಸಿದರೆ, ಕೆಲವರು ಇದಕ್ಕೆ ಸುಮ್ಮನಿರುವುದು ಸರಿಯಲ್ಲ ಹೋರಾಟವೇ ಮುಖ್ಯ. ಹೋರಾಟದಿಂದ ಮಾಡಿದ್ದಲ್ಲಿ ಎಲ್ಲವೂ ನಮಗೆ ಸಿಗುತ್ತವೆ ಎಂಬುವುದರ ಕುರಿತು ಅನೇಕರು ಅಭಿಪ್ರಾಯವ್ಯಕ್ತಪಡಿಸಿದರು.

ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಮಾತನಾಡಿ, ‘ವೇಗವಾಗಿ ಬೆಳೆಯುತ್ತಿರುವ ಪಟ್ಟಣ ತಾಲ್ಲೂಕು ರಚನೆಯಾಗಿ ಅನೇಕ ದಶಕಗಳೇ ಕಳೆದಿವೆ. ಸರ್ಕಾರಕ್ಕೆ ತೆರಿಗೆ ಕಟ್ಟುವುದರಲ್ಲಿ ಸೇಡಂ ಹಿಂದೆ ಬಿಂದಿಲ್ಲ.ಜಿಲ್ಲಾ ರಚನೆಗೆ ಸೇಡಂನ ಎಲ್ಲರೂ ಪಕ್ಷಾತೀತವಾಗಿ, ಧರ್ಮಾತೀತವಾಗಿ ಹಾಗೂ ಜಾತ್ಯಾತೀತವಾಗಿ ಕೆಲಸ ಮಾಡಬೇಕಾಗಿದೆ’ ಎಂದು
ಹೇಳಿದರು.

ಸೇಡಂನ ಶಿವಶಂಕರೇಶ್ವರ ಮಠದ ಶಿವಶಂಕರ ಶಿವಾಚಾರ್ಯ, ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ, ಮುಖಂಡ ಮುಕ್ರಂಖಾನ್, ಚಂದ್ರಶೇಖರರೆಡ್ಡಿ ದೇಶಮುಖ, ನಾಗರೆಡ್ಡಿ ಪಾಟೀಲ ಇದ್ದರು.

ಮಹಿಪಾಲರೆಡ್ಡಿ ಮುನ್ನೂರ ಪ್ರಾಸ್ತಾವಿಕ ಮಾತನಾಡಿದರು. ಶಿವಕುಮಾರ ನಿಡಗುಂದಾ ಸ್ವಾಗತಿಸಿದರು. ಶರಣು ಮಹಾಗಾಂವ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು