ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: ಬಂಧನ, ಬಿಡುಗಡೆ

Published 1 ನವೆಂಬರ್ 2023, 15:33 IST
Last Updated 1 ನವೆಂಬರ್ 2023, 15:33 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಣೆ ಮಾಡುವಂತೆ ಆಗ್ರಹಿಸಿ, ಬುಧವಾರ ನಗರದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಮುಂದಾದ 20ಕ್ಕೂ ಹೆಚ್ಚು ಜನರ ಪೈಕಿ ಕೆಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಹೋರಾಟಗಾರರು ನಗರದ ಕೋರ್ಟ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಿಂದ ಮೆರವಣಿಗೆಯಲ್ಲಿ ತೆರಳಿ ಸರ್ದಾರ್‌ ವಲ್ಲಭಭಾಯ್ ಪಟೇಲ್‌ ವೃತ್ತದ ಬಳಿ ಧ್ವಜಾರೋಹಣ ಮಾಡಲು ಮುಂದಾರು. ಅವರನ್ನು ಮಾರ್ಗ ಮಧ್ಯದಲ್ಲಿ ಪೊಲೀಸರು ತಡೆದು ವಶಕ್ಕೆ ಪಡೆದರು.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೀಡಿರುವ ವಿಶೇಷ ಸೌಲಭ್ಯಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ, ಪ್ರತ್ಯೇಕ ರಾಜ್ಯ ಘೋಷಿಸಬೇಕು ಎಂದು ಹೋರಾಟ ಸಮಿತಿ ಮುಖಂಡ ಎಂ.ಎಸ್. ಪಾಟೀಲ ನರಿಬೋಳ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT