ಕಲಬುರಗಿ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜೇವರ್ಗಿ ತಾಲ್ಲೂಕಿನ ನರಿಬೋಳ ಮತ್ತು ಚಿತ್ತಾಪುರ ತಾಲ್ಲೂಕಿನ ಚಾಮನೂರು ನಡುವಿನ ಭೀಮಾ ನದಿ ಸೇತುವೆಯ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ಸಿಂಗ್ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಶಾಸಕ ಅಲ್ಲಮ ಪ್ರಭು ಪಾಟೀಲ ಅವರೊಂದಿಗೆ ಭೇಟಿ ಮಾಡಿದರು.

‘ಭೂಸ್ವಾಧೀನ ಪ್ರಕ್ರಿಯೆ ತಡವಾದ ಹಿನ್ನೆಲೆಯಲ್ಲಿ ಸೇತುವೆಯ ಕಾಮಗಾರಿ ವಿಳಂಬವಾಗಿದೆ. ಈಗ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಅದು ಸಹ ಪೂರ್ಣಗೊಳ್ಳಲಿದೆ. ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ₹37 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು’ ಎಂದು ಸಚಿವರನ್ನು ಕೋರಿದರು.

ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಕುಂ ಪಟೇಲ್, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗ ರೆಡ್ಡಿ ಇಟಗಿ, ಎಸ್.ಟಿ ಸಮುದಾಯದ ಅಧ್ಯಕ್ಷ ಗುರುರಾಜ ಸುಬೇದಾರ್, ಮುಖಂಡರಾದ ಎಂ.ಎಸ್.ಪಾಟೀಲ, ಶಾಂತಗೌಡ ನರಿಬೋಳ, ರಾಘವೇಂದ್ರ ಕುಲಕರ್ಣಿ, ವಸಂತ ನರಿಬೋಳ, ಶಾಂತಪ್ಪ ಕೂಡಿ, ಮಹಮ್ಮದ್ ನೂರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.