ಮಂಗಳವಾರ, ಸೆಪ್ಟೆಂಬರ್ 21, 2021
22 °C

ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಹಿರಿಯೂರು ಶಾಸಕಿ ಪೂರ್ಣಿಮಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಯಾದವ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.

ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಕಾಲ ಧರಣಿ ಮಾಡಿದ ಪ್ರತಿಭಟ
ನಾಕಾರರು, ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆ ನೀಡಿದರು.

ರಾಜ್ಯದಲ್ಲಿ ಯಾದವ ಸಮಾಜದ 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಇವರ ಪ್ರತಿನಿಧಿಯಾಗಿ ಒಬ್ಬರೇ ಶಾಸಕಿ ಇದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಈಗ ಆಯಾ ಸಮಾಜದವರ ಸಂಖ್ಯೆಗೆ ಅನುಗುಣವಾಗಿ ಮಂತ್ರಿ ಸ್ಥಾನ ನೀಡಲಾಗಿದೆ. ಅದೇ ರೀತಿ ಯಾದವ ಸಮಾಜಕ್ಕೂ ಪ್ರಾತಿನಿಧ್ಯ ನೀಡಬೇಕು ಎಂದೂ ಕೋರಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಉದನೂರ, ಉಪಾಧ್ಯಕ್ಷ ಸುಭಾಷಚಂದ್ರ ರಾಜಮ್, ಮಹಾಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ಯಾದವ, ಖಜಾಂಚಿ ಶ್ರೀಮಂತ ಯಾದವ, ಮುಖಂಡರಾದ ರವಿ ಉದನೂರ, ಯಾದವ, ಕೃಷ್ಣಾ ಉದನೂರ, ಕಾರ್ತಿಕ ಉದನೂರ, ಮಾರುತಿ ಯಾದವ, ಪದ್ಮಾಕರ್ ಯಾದವ, ಹನುಮಂತ ಯಾದವ, ಪ್ರವೀಣಕುಮಾರ, ಮಹಾಂತೇಶ ಯಾದವ, ಪಾಂಡುರಂಗ ಯಾದವ ಸೇರಿದಂತೆ ಹಲವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು