ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಚರ್ಮರೋಗ ತಪಾಸಣಾ ಶಿಬಿರ 24ರಂದು

Published 20 ಮೇ 2024, 13:55 IST
Last Updated 20 ಮೇ 2024, 13:55 IST
ಅಕ್ಷರ ಗಾತ್ರ

ಕಲಬುರಗಿ: ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚರ್ಮರೋಗ ವಿಭಾಗದ ವತಿಯಿಂದ ಮೇ 24ರಂದು ಉಚಿತ ಚರ್ಮರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥರು ಹಾಗೂ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರದಲ್ಲಿ ಮೊಡವೆ, ಬಿಳಿ ಮಚ್ಚೆ, ತಲೆ ಹೊಟ್ಟು, ಕೂದಲು ಉದುರುವಿಕೆ, ಕುಷ್ಟರೋಗ, ಗುಪ್ತರೋಗ, ಇಸುಬು, ಗಜಕರ್ಣ, ಕಪ್ಪು ಕಲೆ, ತೊನ್ನು, ಚಿಬ್ಬು, ಹೈತಿಗೆ, ಲೈಂಗಿಕ ಸಮಸ್ಯೆ, ಸರ್ಪ ಹುಣ್ಣು, ಸೋರಿಯಾಸಿಸ್ ಹಾಗೂ ಚರ್ಮರೋಗಕ್ಕೆ ಸಂಬಂಧಿಸಿದಂತೆ ಉಚಿತ ತಪಾಸಣೆ ಮಾಡಲಾಗುವುದು ಹಾಗೂ ಸಲಹೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT