ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಡಿ.24ರಂದು ‘ಧರ್ಮಪ್ರಜೆ’ ಪ್ರಶಸ್ತಿ ಪ್ರದಾನ

Published 22 ಡಿಸೆಂಬರ್ 2023, 15:58 IST
Last Updated 22 ಡಿಸೆಂಬರ್ 2023, 15:58 IST
ಅಕ್ಷರ ಗಾತ್ರ

ಕಲಬುರಗಿ: ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ 87ನೇ ಜನ್ಮದಿನ ಪ್ರಯುಕ್ತ ಅವರ ಒಡನಾಡಿಗಳಿಗೆ ‘ಧರ್ಮಪ್ರಜೆ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಡಿ.24ರಂದು ಬೆಳಿಗ್ಗೆ 10.15ಕ್ಕೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ ಹಾಗೂ ಸಂಚಾಲಕ ಬಿ.ಎಂ.ಪಾಟೀಲ ಕಲ್ಲೂರ ತಿಳಿಸಿದ್ದಾರೆ.

ಧರ್ಮಸಿಂಗ್‍ ಅವರ ಅನುಯಾಯಿಗಳಾದ ಭೀಮರಾಯಗೌಡ ಬಿರಾದಾರ ಮಾಗಣಗೇರಾ, ಅಹ್ಮದ್ ಪಟೇಲ್ ಬಣಮಗಿ, ಮೈಲಾರಿ ಹೊನಗುಂಟಿ, ಹೊನ್ನಪ್ಪ ಹೊನಕೇರಿ, ಶರಣಪ್ಪ ದೊಡ್ಮನಿ ಕರಕಿಹಳ್ಳಿ, ಗುಂಡಪ್ಪ ನಾಟೀಕಾರ ನೆಲೋಗಿ ಅವರನ್ನು ‘ಧರ್ಮಪ್ರಜೆ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಇಂಡಿ ಶಾಸಕ ಯಶ್ವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸುವರು. ನೇತ್ರ ತಜ್ಞೆ ಡಾ.ರಾಜಶ್ರೀ ರೆಡ್ಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT