ಚಿತ್ತಾಪುರ: ತಾಲ್ಲೂಕು ಪಶು ಪಾಲನಾ ಇಲಾಖೆಯಿಂದ ಈಚೆಗೆ ತಾಲ್ಲೂಕಿನ ದಿಗ್ಗಾಂವ ಗ್ರಾಮದಲ್ಲಿ ಜಾನುವಾರು ಆರೋಗ್ಯ ಶಿಬಿರ ಮತ್ತು ಕರುಗಳ ಪ್ರದರ್ಶನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.

ಆರೋಗ್ಯ ತಪಾಸಣೆ ಶಿಬಿರದಲ್ಲಿ ಜಾನುವಾರುಗಳ ಆರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಚರ್ಮಗಂಟು ರೋಗದ ವಿರುದ್ಧ ಲಸಿಕೆ ಹಾಕಲಾಯಿತು. ಬೇಸಿಗೆ ಕಾಲದಲ್ಲಿ ಜಾನುವಾರುಗಳ ನಿರ್ವಹಣೆ, ರೋಗದ ಕುರಿತು ಮಾಹಿತಿ ನೀಡಲಾಯಿತು. ಗ್ರಾಮದ ರೈತರು ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಶಿಬಿರದಲ್ಲಿ ಒಟ್ಟು 152 ಜಾನುವಾರುಗಳಿಗೆ ಲಸಿಕೆ, 45 ಕರುಗಳಿಗೆ ಜಂತುನಾಶಕ ಔಷಧ ಹಾಕಲಾಯಿತು. ಎತ್ತು ಮತ್ತು ಕರುಗಳ ಪ್ರದರ್ಶನದಲ್ಲಿ ಉತ್ತಮ ಕರುಗಳ ಮತ್ತು ಉತ್ತಮ ಜೋಡಿ ಎತ್ತುಗಳ ಆಯ್ಕೆ ಮಾಡಿ ಅವುಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶಂಕರ ಕಣ್ಣಿ, ಪಶು ವೈದ್ಯಾಧಿಕಾರಿ ಡಾ.ಪ್ರಕಾಶ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-31-1780683926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.