ಸೋಮವಾರ, ನವೆಂಬರ್ 23, 2020
22 °C

ಪ್ರವಾಹ ಸಂತ್ರಸ್ತರೊಂದಿಗೆ ನಾಗತಿಹಳ್ಳಿ ಚಂದ್ರಶೇಖರ ದೀಪಾವಳಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಭಾನುವಾರ, ಸಾಹಿತಿ- ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಸಂತ್ರಸ್ತರೊಂದಿಗೆ ದೀಪಾವಳಿ ಆಚರಿಸಿದರು.

ನಾಗತಿಹಳ್ಳಿಯ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಹಾಗೂ ಟೆಂಟ್ ಸಿನಿಮಾ ಶಾಲೆಯ ಆಶ್ರಯದಲ್ಲಿ ಸಂತ್ರಸ್ತರಿಗೆ ಆಹಾರ ಧಾನ್ಯ, ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ, ಸಿಹಿ ಹಂಚಿ ಅವರು ಖುಷಿ ಪಟ್ಟರು.

ಮಕ್ಕಳನ್ನು ಅಕ್ಕರೆಯಿಂದ ಮಾತನಾಡಿಸಿದ ನಾಗತಿಹಳ್ಳಿ ಅವರು, ಮಹಿಳೆಯರನ್ನೂ ಭೇಟಿ ಮಾಡಿ ಅವರ ಸಂಕಷ್ಟ ಆಲಿಸಿದರು.

ನೆಚ್ಚಿನ ಚಲನಚಿತ್ರ ನಿರ್ದೇಶಕರನ್ನು ಕಣ್ತುಂಬಿಕೊಳ್ಳಲು ಹಲವು ಯುವಕ, ಯುವತಿಯರೂ ಸೇರಿದ್ದರು. ನಾಗತಿಹಳ್ಳಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು  ಖುಷಿ ಪಟ್ಟರು.

ಶನಿವಾರ ಸಂಜೆಯೇ ದೇವಲಗಾಣಗಾಪುರ ಕ್ಷೇತ್ರಕ್ಕೆ ಭೇಟಿ ನೀಡಿದ ನಾಗತಿಹಳ್ಳಿ ಚಂದ್ರಶೇಖರ, ದತ್ತಾತ್ರೇಯ ದರ್ಶನ ಪಡೆದರು.


ನಾಗತಿಹಳ್ಳಿ ಚಂದ್ರಶೇಖರ ಅವರೊಂದಿಗೆ ದೀಪಾವಳಿ ಆಚರಿಸಲು ಬಂದ ಇಟಗಾ ಗ್ರಾಮಸ್ಥರು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು