ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಟಾಸ್ಕ್ ಫೋರ್ಸ್ ಸಭೆಯ ನಡಾವಳಿ ಅನುಮೋದನೆ ಪಡೆದು ಕೂಡಲೇ ಕಾರ್ಯಪ್ರವೃತ್ತರಾಗಬೇಕು’ ಎಂದರು.

‘ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನಾಡಿ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ನೀರು ಬಿಡುಗಡೆ ಮಾಡುವ ಸಂಪೂರ್ಣ ಆಶಾಭಾವನೆ ಹೊಂದಲಾಗಿದೆ. ಕಲಬುರಗಿ ನಗರದಲ್ಲಿ ಎಲ್ಲಿಯೇ ನೀರಿನ ಸಮಸ್ಯೆ ತಲೆದೋರಿದಲ್ಲಿ ಕೂಡಲೇ ಟ್ಯಾಂಕರ್ ಮೂಲಕ ಪೂರೈಸಬೇಕು’ ಎಂದು ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಓ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಪ್ರಸ್ತುತ ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯತಿಯ 18 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 17ರಲ್ಲಿ ಖಾಸಗಿ ಬೋರ್ವೆಲ್ ಮೂಲಕ ಮತ್ತು ಒಂದು ಹಳ್ಳಿಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಸಂಭಾವ್ಯ ನೀರಿನ ಸಮಸ್ಯಾತ್ಮಕ ಹಳ್ಳಿಗಳ ಪಟ್ಟಿ ಮಾಡಲಾಗಿದ್ದು, 295 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದೆ. ಪ್ರಸ್ತುತ 787 ಬೋರ್ವೆಲ್ ಚಾಲ್ತಿಯಲ್ಲಿದ್ದು, 363 ಬೋರ್ವೆಲ್ ಫ್ಲಶ್ ಮಾಡಿದಲ್ಲಿ ನೀರು ಸಿಗಲಿದೆ. ಇನ್ನು 345 ಖಾಸಗಿ ಬೋರ್ವೆಲ್ ಬಾಡಿಗೆ ಪಡೆಯಲು ಈಗಾಗಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ್ ದೌಲಾ ಮಾತನಾಡಿ, ‘12 ಪೌರ ಸಂಸ್ಥೆಗಳ 228 ವಾರ್ಡ್ಗಳಿದ್ದು, ಯಡ್ರಾಮಿ ಪಟ್ಟಣ ಪಂಚಾಯತಿ ಹೊರತುಪಡಿಸಿದರೆ ಉಳಿದಡೆ ಅಷ್ಟೊಂದು ನೀರಿನ ಸಮಸ್ಯೆ ಇಲ್ಲ. ಆಳಂದ, ಅಫಜಲಪುರ ಪಟ್ಟಣಕ್ಕೆ ನೀರು ಪೂರೈಸಲು ನೀರು ಸಂಗ್ರಹ ಇದೆ’ ಎಂದರು.

ಕರ್ನಾಟಕ ರೇಷ್ಮೆ ಅಭಿವೃದ್ದಿ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಎಡಿಸಿ ರಾಯಪ್ಪ ಹುಣಸಗಿ ಇದ್ದರು.

ಕುಡಿಯುವ ನೀರು ಪೂರೈಕೆ ಮೊದಲ ಆದ್ಯತೆಯಾಗಿರಬೇಕು. ವಿಳಂಬ ಧೋರಣೆಯನ್ನು ಸಹಿಸಲಾಗುವುದಿಲ್ಲ. ಜನಪ್ರತಿನಿಧಿಗಳ ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದಿದ್ದರೆ ಅಂಥವರ ಮೇಲೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು

- ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ

ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ನೀರು ಮಲಿನವಾಗಿರುತ್ತದೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಅಧಿಕಾರಿಗಳನ್ನು ಕರೆದು ಎಚ್ಚರಿಸಿದ್ದಾರೆ. ಪರಿಹಾರ ಮಾಡಲಾಗುವುದೇ?

-ಬಿ.ಆರ್.ಪಾಟೀಲ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.