‘ಪ್ರಸ್ತಾವ ಬಂದರೆ ಮೋಡ ಬಿತ್ತನೆ ಚರ್ಚೆ’

7
ಮಹಾರಾಷ್ಟ್ರದಿಂದ ಭೀಮಾನದಿಗೆ ನೀರು ಹರಿಸಲು ಕ್ರಮ

‘ಪ್ರಸ್ತಾವ ಬಂದರೆ ಮೋಡ ಬಿತ್ತನೆ ಚರ್ಚೆ’

Published:
Updated:
Deccan Herald

ಕಲಬುರ್ಗಿ:‘ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮೋಡ ಬಿತ್ತನೆ ಮಾಡಬೇಕು ಎಂದು ಕೃಷಿ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಪ್ರಸ್ತಾವ ಬಂದರೆ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರ ಜತೆ ಚರ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸದ್ಯ ಶೇ 60–70ರಷ್ಟು ಮಳೆ ಕೊರತೆಯಾಗಿದೆ. ಮೂರು ದಿನಗಳಿಂದ ಜಿಟಿ ಜಿಟಿ ಮಳೆ ಸುರಿದಿದ್ದರಿಂದ, ತೇವಾಂಶ ಉಂಟಾಗಿದೆ. ಹೀಗಾಗಿ ಮೋಡ ಬಿತ್ತನೆ ಅಥವಾ ಬರ ಘೋಷಣೆ ಬಗ್ಗೆ ತಕ್ಷಣ ನಿರ್ಣಯ ಕೈಗೊಳ್ಳಲು ಆಗದು’ ಎಂದರು.

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರಲ್ಲ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ಬೀದರ್‌ನಿಂದ ಚಾಮರಾಜನಗವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರ ರಚನೆಯಾಗಿ ಎರಡೂವರೆ ತಿಂಗಳಾಗಿದೆ’ ಎಂದು ಹೇಳಿದರು.

‘ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆಯಲಾಗಿದೆ. ಅಲ್ಲದೆ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಬೆಣ್ಣೆತೊರಾ ಜಲಾಶಯದಿಂದ ಫಿಲ್ಟರ್ ಬೆಡ್‌ಗೆ ಸಂಪರ್ಕ ಕಲ್ಪಿಸುವ ಪೈಪ್‌ಲೈನ್ ದುರಸ್ತಿಯಲ್ಲಿದೆ. ಅದಕ್ಕಾಗಿ ₹13 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ನಗರದಲ್ಲಿ ಕುಡಿಯುವ ನೀರಿನ ಬವಣೆ ತಪ್ಪಲಿದೆ’ ಎಂದು ತಿಳಿಸಿದರು.

ಖಾಲಿ ಹುದ್ದೆ ಶೀಘ್ರ ಭರ್ತಿ: ‘ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಯಲ್ಲಿ ಪ್ರಮುಖ ಹುದ್ದೆಗಳು ಖಾಲಿಯಿದ್ದು, ಬೇರೆ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಕಾರ್ಯದರ್ಶಿ ಸುಬೋಧ ಯಾದವ್ ಕೇಳಿಕೊಂಡಿದ್ದಾರೆ. ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದರು.

 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !