ನಂತರ ಮಳಖೇಡದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಶಾಲೆಯ ಸ್ಥಿತಿಗತಿ ಪರಿಶೀಲಿಸಿದರು. ಶಾಲೆ ಬಹಳ ಹಳೆಯದಾಗಿದ್ದು, ಸೋರುತ್ತಿದೆ. ದುರಸ್ತಿಗೆ ಕೈಗೊಂಡಿರುವ ಕ್ರಮ ಏನು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಾಲೆಯ ನವೀಕರಣಕ್ಕಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸರ್ಕಾರದಲ್ಲಿ ಕಡತವಿದೆ. ಶೀಘ್ರ ಅನುದಾನ ಬಿಡುಗಡೆಯಾದಲ್ಲಿ, ದುರಸ್ತಿ ಮಾಡಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.