ಮಂಗಳವಾರ, ಡಿಸೆಂಬರ್ 7, 2021
24 °C

ಕಲಬುರಗಿ ಗ್ರಾಮ ವಾಸ್ತವ್ಯ: ಹೊಸಳ್ಳಿಗೆ ಬಂದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಕಲಬುರಗಿ: ಗ್ರಾಮದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ವಿವಿಧ ಇಲಾಖೆಗಳಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಸ್ಥಳದಲ್ಲೇ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಗ್ರಾಮವಾಸ್ತವ್ಯ ಕೈಗೊಂಡಿರುವ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರನ್ನು ಜಿಲ್ಲೆಯ ಕಾಳಗಿ ತಾಲ್ಲೂಕಿನ ಹೊಸಳ್ಳಿ (ಎಚ್‌) ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

ಡೊಳ್ಳಿನ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಅವರನ್ನು ಕರೆತರಲಾಯಿತು.

ಜಿಲ್ಲಾಧಿಕಾರಿ ಜ್ಯೋತ್ಸ್ನಾಅವರೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಓ ಡಾ. ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಮೋನಾ ರೂಟ್ ಇದ್ದಾರೆ.

ಗ್ರಾಮ ವಾಸ್ತವ್ಯದ ಅಂಗವಾಗಿ ಆರೋಗ್ಯ ಇಲಾಖೆಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದ್ದು, ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು