ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಆಗುವ ಹಂಬಲ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್

Published 12 ಏಪ್ರಿಲ್ 2024, 16:07 IST
Last Updated 12 ಏಪ್ರಿಲ್ 2024, 16:07 IST
ಅಕ್ಷರ ಗಾತ್ರ

ಅಫಜಲಪುರ: ಇಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಹಂಬಲ ವ್ಯಕ್ತಪಡಿಸಿದರು.

ದತ್ರಾತ್ರೇಯ ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಈ ಭಾಗದಲ್ಲಿ ದೇವಲ ಗಾಣಗಾಪುರ ದತ್ತ ಮಹಾರಾಜರ ದೇವಸ್ಥಾನ ಪವಿತ್ರವಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಅದಕ್ಕಾಗಿ ಈ ದೇವಸ್ಥಾನವನ್ನು ಅಭಿವೃದ್ಧಿ ಮಾಡಲಾಗುವುದು. ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ. ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT