ಕಲಬುರಗಿ: 'ನಾವು ಸಂಚರಿಸುವಾಗ ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಮಾಡಬೇಡಿ' ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.
ಕಲಬುರಗಿಯಲ್ಲಿ ಶನಿವಾರ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ಅವರೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್ ಅಥವಾ ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.