ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುವಿವಿ ಘಟಿಕೋತ್ಸವ; ಆರು ಗಣ್ಯರಿಗೆ ಗೌರವ ಡಾಕ್ಟರೇಟ್

Last Updated 27 ಏಪ್ರಿಲ್ 2022, 7:29 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಅರ್.ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ವಿಶ್ವವಿದ್ಯಾಲಯದ 39 ಮತ್ತು 40ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

39ನೇ ಘಟಿಕೋತ್ಸವದಲ್ಲಿ ಆಯ್ಕೆಯಾದ ಬೀದರ್ ಜಿಲ್ಲೆಯ ಸಿದ್ದರಾಮ ಶರಣರು(ಬೆಲ್ದಾಳ ಶರಣರು), ಬೀದರ ಜಿಲ್ಲೆಯ ಡಾ. ಬಸವರಾಜ ಜಿ. ಪಾಟೀಲ ಅಷ್ಟೂರ ಹಾಗೂ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಕಲಬುರಗಿ ಜಿಲ್ಲೆಯ ವೇಣುಗೋಪಾಲ ಡಿ. ಹೆರೂರ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

40ನೇ ಘಟಿಕೋತ್ಸವದ ಭಾಗವಾಗಿ ಸಮಾಜಕಾರ್ಯ ಕ್ಷೇತ್ರದಲ್ಲಿನ ಸಾಧನೆಗೆ ಬೀದರ್ ಜಿಲ್ಲೆಯ ಗುರಮ್ಮ ಸಿದ್ದಾರೆಡ್ಡಿ, ಶಿಕ್ಷಣ ಕ್ಷೇತ್ರದಲ್ಲಿನ‌ ಸಾಧನೆಗೆ ಮಂಗಳೂರಿನ ಯೇನಪೋಯೆ ಶಿಕ್ಷಣ ಸಂಸ್ಥೆಯ ಅಬ್ದುಲ್ಲಾ ಕುನ್ಹಿ ಹಾಗೂ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಬೆಂಗಳೂರಿನ ಗೌತಮ ರಾಧಾಕೃಷ್ಣ ದೇಸಿರಾಜು ಅವರನ್ನು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಕುಲಪತಿ ಪ್ರೊ. ದಯಾನಂದ ಅಗಸರ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ, ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಡೀನರು, ಪಿಎಚ್.ಡಿ ಹಾಗೂ ಚಿನ್ನದ ‌ಪದಕ ಪಡೆದ ಪದವೀಧರರು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT