ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಕೆಆರ್‌ಡಿಬಿ ಅಧ್ಯಕ್ಷರಾಗಿ ಡಾ. ಅಜಯ್ ಸಿಂಗ್ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿ
Published 10 ಆಗಸ್ಟ್ 2023, 14:12 IST
Last Updated 10 ಆಗಸ್ಟ್ 2023, 14:12 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರನ್ನಾಗಿ ಜೇವರ್ಗಿ ಶಾಸಕ, ಮಾಜಿ ಸಿಎಂ ಎನ್. ಧರ್ಮ ಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಸತತವಾಗಿ ಮೂರು ಬಾರಿ ಶಾಸಕರಾಗಿ ಅಯ್ಕೆಯಾಗಿರುವ ಅಜಯ್ ಸಿಂಗ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಬೇಸರಗೊಂಡಿದ್ದ ಅಜಯ್ ಸಿಂಗ್ ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಯೂ ಭಾಗವಹಿಸಿರಲಿಲ್ಲ.

ಕೆಕೆಆರ್ ಡಿಬಿಗೆ ಮೊದಲಿನಿಂದಲೂ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿತ್ತು. ಕಳೆದ ಅವಧಿಯ ಬಿಜೆಪಿ ಸರ್ಕಾರದಲ್ಲಿ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಸಹ ಶಾಸಕರನ್ನೇ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಅಜಯ್ ಸಿಂಗ್ ಅವರ ಜೊತೆಗೆ 10 ಜನ ಸದಸ್ಯರನ್ನು ನೇಮಕ ಮಾಡಲಾಗಿದೆ.

ರಾಜ್ಯಸಭೆ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ವಿಧಾನಪರಿಷತ್ ಸದಸ್ಯರಾದ ಅರವಿಂದ ಅರಳಿ, ತಿಪ್ಪಣ್ಣಪ್ಪ‌ ಕಮಕನೂರ, ಶಾಸಕರಾದ ಬಿ.ಆರ್. ಪಾಟೀಲ, ಹಂಪನಗೌಡ ಬಾದರ್ಲಿ, ರಾಜಾ ವೆಂಕಟಪ್ಪ ನಾಯಕ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ್, ತುಕಾರಾಮ್, ಎಚ್.ಆರ್. ಗವಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಅಧ್ಯಕ್ಷರು ಹಾಗೂ ಸದಸ್ಯರ ಅವಧಿ ಒಂದು ವರ್ಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT