ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಚರಣೆ

Last Updated 14 ಏಪ್ರಿಲ್ 2021, 7:24 IST
ಅಕ್ಷರ ಗಾತ್ರ

ಕಲಬುರ್ಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದ ಜಗತ್ ವೃತ್ತದ ಬಳಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದ‌ ಪರವಾಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸಂವಿಧಾನಿಕ ಮೌಲ್ಯಗಳಾದ ಸ್ವಾತಂತ್ರ್ಯ, ‘ಸಮಾನತೆ, ಭ್ರಾತೃತ್ವ ಮನೋಭಾವವನ್ನು ನಮ್ಮ ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸಂವಿಧಾನವೇ ನಮ್ಮೆಲ್ಲರ ಧರ್ಮವಾಗಬೇಕು ಮತ್ತು ಅದರ ಚೌಕಟ್ಟಿನಲ್ಲಿಯೇ ನಾವು ಸಾಗಬೇಕು’ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ,ನಗರ ಪೊಲೀಸ್ ಆಯುಕ್ತ ಎನ್. ಸತೀಶ ಕುಮಾರ, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಶ್ ಸಾಶಿ,ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಅಲ್ಲಾಭಕಷ್‌ ಇದ್ದರು.

ಇದಕ್ಕೂ ಪೂರ್ವ ಸಿದ್ದಾರ್ಥ ಬುದ್ಧ ವಿಹಾರ ಟ್ರಸ್ಟ್‌ನ ಸಂಘಾನಂದ ಭಂತೇಜಿ ಅವರ ನೇತೃತ್ವದಲ್ಲಿಬುದ್ಧ ವಂದನೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಅವರು ಪಂಚಶೀಲ ಧ್ವಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿನೀಲ ಧ್ವಜಾರೋಹಣ ಮಾಡಿದರು.

ಜಯಂತೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಔರಾದಕರ್,ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ, ಮುಖಂಡರಾದ ಗುಂಡಪ್ಪ‌ ಲಂಡನಕರ್, ದಶರಥ‌ ಒಂಟಿ ಇದ್ದರು.

ಜನಪ್ರತಿನಿಧಿಗಳಿಂದಲೂ ಸಂವಿಧಾನ ಪಿತಾಮಹನಿಗೆ ನಮನ:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ, ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ,ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹಾಗೂ ಮಾಜಿ ವಿಧಾನ ಪರಿಷತ್ತಿನ‌‌ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸಹ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT