ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್ | ₹500 ಕೋಟಿಗೂ ಹೆಚ್ಚು ಅವ್ಯವಹಾರ; ಸಚಿವ ಡಾ.ಶರಣಪ್ರಕಾಶ ಪಾಟೀಲ

Published : 25 ಸೆಪ್ಟೆಂಬರ್ 2024, 5:49 IST
Last Updated : 25 ಸೆಪ್ಟೆಂಬರ್ 2024, 5:49 IST
ಫಾಲೋ ಮಾಡಿ
Comments

ಕಲಬುರಗಿ: ‘ಕೋವಿಡ್ ಸಮಯದಲ್ಲಿ ನಡೆದಿರುವ ಹಗರಣ ಸಂಬಂಧ ತನಿಖೆಗೆ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಸಮಿತಿಯ ಪ್ರಾಥಮಿಕ ವರದಿಯಲ್ಲಿ ₹500 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿರುವುದಾಗಿ ಹೇಳಲಾಗಿದೆ. ಹಗರಣದ ಮೊತ್ತ ಇನ್ನೂ ಹೆಚ್ಚಾಗಬಹುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಡಿ ಕುನ್ಹಾ ನೇತೃತ್ವದ ಸಮಿತಿಯು ಮುಖ್ಯಮಂತ್ರಿಗಳಿಗೆ ಪ್ರಾಥಮಿಕ ವರದಿ ಸಲ್ಲಿಕೆ ಮಾಡಿದೆ. ಪ್ರಾಥಮಿಕ ವರದಿಯಲ್ಲಿ ಬಹಳಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದಿದೆ. ಪೂರ್ಣಪ್ರಮಾಣ ವರದಿಯಲ್ಲಿ ಏನು ಬರುತ್ತದೆ ನೋಡಬೇಕು. ಮುಖ್ಯಮಂತ್ರಿಗಳು ಸಹ ಉನ್ನತ ಸಮಿತಿ ಮಾಡಿ ಕ್ರಮ ತೆಗೆದುಕೊಳ್ಳುವಂತೆಯೂ ಹೇಳಿದ್ದಾರೆ’ ಎಂದರು.

‘ಆಪರೇಶನ್ ಥಿಯೇಟರ್ ಉಪಕರಣಗಳ ಖರೀದಿ ಟೆಂಡರ್‌ನಲ್ಲಿ ಕೇರಳದ ಕಂಪನಿ ಪಾಲ್ಗೊಂಡಿರಲಿಲ್ಲ. ಟೆಂಡರ್‌ನಲ್ಲಿದ್ದ ನಾಲ್ವರ ಪೈಕಿ ಮೂವರನ್ನು ತಿರಸ್ಕರಿಸಿ, ಒಬ್ಬರಿಗೆ ಕೊಟ್ಟಿದ್ದೇವೆ ಎನ್ನುವ ಬಿಜೆಪಿಗರ ಹೇಳಿಕೆಯೂ ಸುಳ್ಳು. ಅರ್ಹತೆ ಇಲ್ಲದ ಕಾರಣಕ್ಕೆ ಇಬ್ಬರನ್ನು ತಿರಸ್ಕರಿಸಲಾಗಿದೆ. ಅನುಮೋದನೆಗೊಂಡ ಇಬ್ಬರಲ್ಲಿ ಒಬ್ಬರಿಗೆ ಟೆಂಡರ್ ಕೊಡಲಾಗಿದೆ’ ಎಂದರು.

‘ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿಗರು ಹುಸಿ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿಗರು ಅಧಿಕಾರ ಕಳೆದುಕೊಂಡ ಬಳಿಕ ನೀರಿನಿಂದ ಹೊರ ಬಿದ್ದ ಮೀನಿನಂತೆ ಚಡಪಡಿಸುತ್ತಿದ್ದಾರೆ. ಕೇರಳ ಮೂಲದ ಕಂಪನಿಯ ಬಗ್ಗೆ ಯಾಕಿಷ್ಟು ಆಸಕ್ತಿ’ ಎಂದು ಪ್ರಶ್ನಿಸಿದರು.

ಮಂದಿರಗಳನ್ನು ಮುಜರಾಯಿ ಇಲಾಖೆಯಿಂದ ಕೈ ಬಿಡುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಇದು ಜನರ ಭಾವನೆಗಳಿಗೆ ಸಂಬಂಧಿಸಿದ ವಿಚಾರ. ನಮ್ಮ ಸರ್ಕಾರ ಜನರ ಅಭಿಪ್ರಾಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತದೆ. ಸಾರ್ವಜನಿಕರ ಅಭಿಪ್ರಾಯವನ್ನು ಪರಿಶೀಲಿಸಲಾಗುತ್ತದೆ. ಜನರ ಭಾವನೆಗಳಿಗೆ ಗೌರವ ಕೊಡಬೇಕಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT