ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ವರ್ಷಗಳಲ್ಲಿ 16 ವರ್ಷ ತೀವ್ರ ಬರ

385 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಸಾಧ್ಯತೆ
Published 23 ಏಪ್ರಿಲ್ 2024, 4:51 IST
Last Updated 23 ಏಪ್ರಿಲ್ 2024, 4:51 IST
ಅಕ್ಷರ ಗಾತ್ರ

ಕಲಬುರಗಿ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ 854 ಗ್ರಾಮಗಳ ಪೈಕಿ 385 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಕಲಬುರಗಿಯಲ್ಲಿ ಸಾಮಾನ್ಯವಾಗಿ ಸುಮಾರು 104.74 ಮಿಲಿ ಮೀಟರ್ ಮಳೆಯಾಗುತ್ತದೆ. ಆದರೆ, ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. 2001ರಿಂದ ಇಲ್ಲಿಯವರೆಗಿನ 23 ವರ್ಷಗಳಲ್ಲಿ 16 ವರ್ಷಗಳು ತೀವ್ರ ಬರ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಅಂತರ್ಜಲಮಟ್ಟ ಕುಸಿದಿದೆ ಎಂದು ಹೇಳಿದೆ.

ಕಲಬುರಗಿ ತಾಲ್ಲೂಕಿನಲ್ಲಿ 54 ಗ್ರಾಮಗಳು ನೀರಿನ ಕೊರತೆ ಎದುರಿಸುವ ಸಾಧ್ಯತೆಯಿದೆ. ಆಳಂದ ತಾಲ್ಲೂಕಿನ 85, ಚಿಂಚೋಳಿ ತಾಲ್ಲೂಕಿನ 21, ಅಫಜಲಪುರ ತಾಲ್ಲೂಕಿನ 115, ಜೇವರ್ಗಿ ಮತ್ತು ಶಹಾಬಾದ್‌ ತಾಲ್ಲೂಕುಗಳ ತಲಾ 5, ಚಿತ್ತಾಪುರ ತಾಲ್ಲೂಕಿನ 14, ಕಾಳಗಿ ತಾಲ್ಲೂಕಿನ 16, ಯಡ್ರಾಮಿ ತಾಲ್ಲೂಕಿನ 8, ಕಮಲಾಪುರ ತಾಲ್ಲೂಕಿನ 23 ಹಾಗೂ ಸೇಡಂ ತಾಲ್ಲೂಕಿನ 39 ಗ್ರಾಮಗಳಲ್ಲಿ ನೀರಿನ ಕೊರತೆ ಕಂಡುಬರಲಿದೆ ಎಂದು ಗುರುತಿಸಲಾಗಿದೆ.

ನೀರಿನ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಸಭೆ ನಡೆಸಿದ್ದಾರೆ. ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ 313 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿದ್ದು, ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ನೀರು ಸರಬರಾಜು ಮಾಡಲು 33 ಟ್ಯಾಂಕರ್‌ಗಳ ಟೆಂಡರ್ ಕರೆಯಲಾಗುವುದು. ವಿಭಾಗದಲ್ಲಿ 9,000 ಲೀಟರ್ ಸಾಮರ್ಥ್ಯದ 7 ಟ್ಯಾಂಕರ್‌ಗಳಿವೆ. ಆಳಂದ ಮತ್ತು ಅಫಜಲಪುರ ತಾಲ್ಲೂಕುಗಳಿಗೆ ತಲಾ 2, ಕಲಬುರಗಿ ಮತ್ತು ಜೇವರ್ಗಿ ತಾಲ್ಲೂಕುಗಳಿಗೆ ತಲಾ ಒಂದು ಟ್ಯಾಂಕರ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT