ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಬದಿ ವಾಹನ ನಿಲ್ಲಿಸದಿರಲು ಮನವಿ

Last Updated 25 ಜನವರಿ 2021, 16:02 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಪಕ್ಕದಲ್ಲಿ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸುವುದೇ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಎಲ್ಲೆಂದರಲ್ಲಿ ಭಾರಿ ವಾಹನಗಳನ್ನು ನಿಲ್ಲಿಸಬಾರದು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ನಿಗಮ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.‌

ಟ್ರ್ಯಾಕ್ಟರ್‌, ಲಾರಿ, ಟಿಪ್ಪರ್‌, ಗೂಡ್ಸ್‌ವಾಹನ, ಖಾಸಗಿ ಬಸ್‌ ಮುಂತಾದ ವಾಹನಗಳನ್ನು ಹೆದ್ದಾರಿ ಪಕ್ಕದಲ್ಲಿ, ತಿರುವುಗಳು ಇದ್ದಲ್ಲೇ ನಿಲ್ಲಿಸುತ್ತಾರೆ. ವಾಹನಗಳು ದೂರದಿಂದಲೇ ಕಾಣಿಸುವಂತೆ ಇಂಡಿಕೇಟರ್‌ ಬಲ್ಬ್‌ ಕೂಡ ಹಾಕುವುದಿಲ್ಲ. ವಾಹನಗಳ ಹಿಂಬದಿಯಲ್ಲಿ ಪ್ರತಿಫಲಿಸುವ ರೇಡಿಯಂಗಳನ್ನೂ ಅಳವಡಿಸುವುದಿಲ್ಲ. ಇದರಿಂದ ಅಪಾಯಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ವಾಹನ ಚಾಲಕರು ಸಂಚಾರ ನಿಯಮ ಪಾಲಿಸುವ ಜತೆಗೆ, ರಾತ್ರಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದನ್ನು ಬಿಡಬೇಕು. ಈ ವಿಚಾರದಲ್ಲಿ ಸಂಚಾರ ಪೊಲಿಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದೂ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT