ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಹಳ್ಳಿಖೇಡ ಬಿ: ಉಪ ತಹಶೀಲ್ದಾರ್‌ ಅಮಾನತು

Last Updated 12 ಏಪ್ರಿಲ್ 2019, 14:30 IST
ಅಕ್ಷರ ಗಾತ್ರ

ಕಲಬುರ್ಗಿ: ಮಾಶಾಸನ ಮಂಜೂರು ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಾಗೂ ಕರ್ತವ್ಯಲೋಪವೆಸಗಿದ ಕಾರಣಕ್ಕಾಗಿ ಬೀದರ್‌ ಜಿಲ್ಲೆ ಹುಮನಾಬಾದ್‌ ತಾಲ್ಲೂಕಿನ ಹಳ್ಳಿಖೇಡ (ಬಿ) ನಾಡ ಕಚೇರಿಯ ಉಪ ತಹಶೀಲ್ದಾರ್‌ ಪ್ರೇಮದಾಸ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾಗಿ ಪ್ರಾದೇಶಿಕ ಆಯುಕ್ತ ಸುಭೋದ್‌ ಯಾದವ್‌ ತಿಳಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು ಅರ್ಜಿಗಳ ಸ್ವೀಕಾರ ಮತ್ತು ಮಂಜೂರಾತಿ ನೀಡಬಾರದು ಎಂಬ ಸೂಚನೆ ನೀಡಿದೆ. ಆದರೂ ಇವರು ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಮಾಸಾಶನಗಳನ್ನು ಮಂಜೂರು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT