ಕಲಬುರಗಿ: ‘ಈಡಿಗ ಸಮುದಾಯದ ಪ್ರಗತಿಗಾಗಿ 16 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 2026ರ ಜ. 6ರಿಂದ ಫೆ. 14ರವರೆಗೆ 3ನೇ ಹಂತದ ಪಾದಯಾತ್ರೆ ನಡೆಸಲಾಗುವುದು’ ಎಂದು ಕರದಾಳ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಹೇಳಿದರು.

ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯುತ್ಸವ ಆಚರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಈಡಿಗ ಸಮಾಜ ಬಹಳಷ್ಟು ಪೆಟ್ಟು ತಿಂದಿದೆ. ಸಮುದಾಯದವರ ಬವಣೆ ನೀಗಬೇಕಾದರೆ ಹೋರಾಟ ಅನಿವಾರ್ಯ’ ಎಂದರು.

‘ಸಮಾಜದ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಚಿಂಚೋಳಿಯಿಂದ ಕಲಬುರಗಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಎರಡು ಹಂತಗಳಲ್ಲಿ ಪಾದಯಾತ್ರೆ ಮಾಡಲಾಗಿತ್ತು. ಇದೀಗ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಕರದಾಳ ಶಕ್ತಿಪೀಠದಿಂದ ಆರಂಭಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಒಟ್ಟು 758 ಕಿ.ಮೀ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.