ಕಲಬುರ್ಗಿ:ಹೈದರಾಬಾದ್ ಕರ್ನಾಟಕ ಭಾಗದಲ್ಲೇ ಮೊದಲನೇ ಬಾರಿಗೆ ಮಹಿಳೆಯರಿಗಾಗಿ 1934ರಲ್ಲಿ ಶಾಲೆ ತೆರೆದು ಮಹಿಳೆಯರಲ್ಲಿ ಬೌದ್ಧಿಕ, ರಾಜಕೀಯ, ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ಶರಣಬಸವ ದೊಡ್ಡಪ್ಪ ಅಪ್ಪ ಅವರ ಶೈಕ್ಷಣಿಕ ಕೊಡುಗೆ ಅಪಾರವಾಗಿದೆ ಎಂದು ಡಾ.ನೀಲಾಂಬಿಕಾ ಶೇರಿಕಾರ್ ಹೇಳಿದರು.

ನಗರದ ಶರಣಬಸವ ವಿ.ವಿ.ಯ ಶತಮಾನೋತ್ಸವ ಸಭಾಂಗಣದಲ್ಲ್ಲಿ ಮಂಗಳವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ- 2019) ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಬಗ್ಗೆ ಅವರು ವಿಶೇಷ ಉಪನ್ಯಾಸ ನೀಡಿದರು.

ಅದರ ಪೂರಕವಾಗಿ ಶರಣಬಸವಪ್ಪ ಅಪ್ಪ ಅವರು ಮಹಿಳಾ ಎಂಜಿನಿಯರಿಂಗ್ ಕಾಲೇಜು ತೆರೆದು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಪ್ರಸ್ತುತ ಮಹಿಳೆಯರು ಐಎಎಸ್, ಐಪಿಎಸ್, ಕೆಎಎಸ್, ಎಂಜಿನಿಯರಿಂಗ್ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ ಸೇರಿದಂತೆ ವಿವಿಧ ಉನ್ನತ ಮಟ್ಟದ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಹೆಮ್ಮೆಯ ಸಂಗತಿ. ಆದರೆ ಮಹಿಳೆಯರು ಕೇವಲ ಮಗುವಿಗೆ ಜನ್ಮ ನೀಡುವ ಯಂತ್ರವಾಗದೇ ಸಮಾಜಕ್ಕೆ ಆದರ್ಶವಾಗಿರಬೇಕು ಎಂದರು.

ಗಂಡು, ಹೆಣ್ಣು ಎನ್ನದೇ ಯಾವುದೇ ಭೇದಭಾವ ಮಾಡದೇ ಮಹಿಳೆಯರನ್ನು ಸಮಾಜದಲ್ಲಿ ಸಮಾನವಾಗಿ ಕಾಣಬೇಕು. ಅವರ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪುರಷರಂತೆ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನವಾದ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ವಿ.ವಿ. ಕುಲಸಚಿವ ಡಾ.ಅನೀಲಕುಮಾರ ಬಿಡವೆ, ವಿ.ವಿ.ಯ ಸಮ ಕುಲಪತಿ ವಿ.ಡಿ.ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.