ಶನಿವಾರ, ಜೂನ್ 12, 2021
28 °C

ವಿದ್ಯಾರ್ಥಿಗಳಿಗೆ ತಕ್ಷಣ ಸಾಲ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕೊರೊನಾ ಹಾವಳಿಯಿಂದಾಗಿ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡಿದ್ದು, ತಮ್ಮ ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಲು ಪೋಷಕರು ಅಸಮರ್ಥರಾಗಿದ್ದು, ಕೂಡಲೇ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಶೈಕ್ಷಣಿಕ ಸಾಲ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಹಲವು ಬಾರಿ ಮನವಿ ಸಲ್ಲಿಸಿದರೂ ನಿಗಮವು ನಿರ್ಲಕ್ಷ್ಯ ವಹಿಸಿದೆ. ಆದ್ಯತೆಯ ಮೇರೆಗೆ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ತಾಂತ್ರಿಕ ಕಾರಣವೊಡ್ಡಿ ಕಡತಗಳನ್ನು ವಿಲೇವಾರಿ ಮಾಡಲು ನಿರಾಕರಿಸುವ ಬದಲು ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣ ವಿದ್ಯಾರ್ಥಿಗಳಿಗೆ ಸಾಲ ಮಂಜೂರು ಮಾಡಿ ಆರ್ಥಿಕ ನೆರವು ನೀಡಬೇಕು ಎಂದು ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ಸರ್ಮಾಮ, ಝಯೀಮ್, ಇರ್ಫಾನ್, ಇಸ್ಮಾಯಿಲ್ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.