ಶೂನ್ಯ ದಾಖಲಾತಿಯ ಶಾಲೆಗಳಿಗೆ ಭೇಟಿ
‘ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಶೂನ್ಯ ಫಲಿತಾಂಶ ದಾಖಲಿಸಿದ ಶಾಲೆಗಳು ಗ್ರಾಮೀಣ ಭಾಗದ ತಾಂಡಾದಲ್ಲಿನ ಶಾಲೆಗಳಲ್ಲಿ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ವಾತಾವರಣವನ್ನು ಅವಲೋಕಿಸುತ್ತೇವೆ. ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ ಶಾಲೆಗಳಿಗೂ ಹೋಗುತ್ತೇವೆ’ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದರು. ‘ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಗಣನೀಯವಾಗಿ ಕುಸಿದಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ 2 ಮತ್ತು 3ನೇ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಣೆಯ ಕುರಿತು ಸಲಹೆಗಳನ್ನು ನೀಡಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಆರಂಭಿಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಿದ್ದೇವೆ’ ಎಂದು ಮಾಹಿತಿ ನೀಡಿದರು.