ಭಾನುವಾರ, ಸೆಪ್ಟೆಂಬರ್ 19, 2021
28 °C

ಚುನಾವಣಾಧಿಕಾರಿಗಳ ಕಚೇರಿ ಸ್ಥಳ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆಯ ಒಟ್ಟು 55 ವಾರ್ಡ್‍ಗಳಿಗೆ ಪ್ರತಿ 5 ವಾರ್ಡ್‍ಗೆ ಒಬ್ಬರಂತೆ ಚುನಾವಣಾಧಿಕಾರಿಗಳನ್ನು ನೇಮಿಸಿ ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ಆದರೆ, ಈಗ ಆಡಳಿತದ ದೃಷ್ಟಿಯಿಂದ ಕೆಲ ಚುನಾವಣಾಧಿಕಾರಿಗಳ ಕಚೇರಿ ಸ್ಥಳಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ವಾರ್ಡ್ ಸಂಖ್ಯೆ 1, 2, 3, 4 ಹಾಗೂ 5ಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಗದಿಪಡಿಸಿದ ಕಲಬುರ್ಗಿ ಉಪವಿಭಾಗಾಧಿಕಾರಿ ಕಚೇರಿ ಬದಲು ಕಲಬುರ್ಗಿ ತಹಶೀಲ್ದಾರರ ಕಚೇರಿಗೆ ಬದಲಾವಣೆ ಮಾಡಲಾಗಿದೆ.

ವಾರ್ಡ್ ಸಂಖ್ಯೆ 13, 14, 18, 19 ಹಾಗೂ 20ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಕಚೇರಿ ಬದಲಾಗಿ ಜಗತ್ ವೃತ್ತದ ಜಿಲ್ಲಾ ಪಂಚಾಯಿತಿ ಸಭಾಂಗಣದ ಎದುರಿಗೆ ಇರುವ ಜಿಲ್ಲಾ ಗ್ರಂಥಾಲಯ ಅಧಿಕಾರಿಗಳ ಕಚೇರಿಗೆ ಬದಲಾವಣೆ ಮಾಡಲಾಗಿದೆ.

ವಾರ್ಡ್ ಸಂಖ್ಯೆ 38, 39, 40, 42 ಹಾಗೂ 43ಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಗದಿಪಡಿಸಿದ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರ ಕಚೇರಿ ಬದಲಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಬದಲಾವಣೆ ಮಾಡಲಾಗಿದೆ.

ವಾರ್ಡ್ ಸಂಖ್ಯೆ 33, 34, 46, 47 ಮತ್ತು 48 ಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಗದಿಪಡಿಸಿದ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿಯ ಬದಲಾಗಿ ನಗರದ ಹಳೆಯ ಎಸ್.ಪಿ. ಕಚೇರಿ ಹಿಂಭಾಗದಲ್ಲಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಗೆ ಬದಲಾವಣೆ ಮಾಡಲಾಗಿದೆ.

ವಾರ್ಡ್ ಸಂಖ್ಯೆ 22, 28, 29, 30 ಹಾಗೂ 35 ಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಗದಿಪಡಿಸಿದ ಇಲ್ಲಿನ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಬದಲಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಚೇರಿಗೆ ಬದಲಾವಣೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.