ಗುರುವಾರ , ಸೆಪ್ಟೆಂಬರ್ 23, 2021
20 °C

ಅಧ್ಯಕ್ಷರಾಗಿ ಸೂಗುರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ದಿ ಇನ್‌ಸ್ಟಿಟ್ಯೂಶನ್ ಆಫ್ ಎಂಜಿನಿಯರ್ಸ್‌ ಕಲಬುರ್ಗಿ ಸ್ಥಾನೀಯ ಕೇಂದ್ರದ ಅಧ್ಯಕ್ಷರಾಗಿ ನಿವೃತ್ತ ಅಧೀಕ್ಷಕ ಎಂಜಿನಿಯರ್ ಸುಭಾಷ್ ಸೂಗುರ, ಗೌರವ ಕಾರ್ಯದರ್ಶಿಯಾಗಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಹನುಮಯ್ಯ ಬೇಲೂರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಸದ್ಯದ ಅಧ್ಯಕ್ಷ ಬಿ.ಎಸ್‌. ಮೋರೆ, ಗೌರವ ಕಾರ್ಯದರ್ಶಿ ಡಾ. ಬಾಬುರಾವ ಎಸ್. ಶೇರಿಕಾರ, 2021-2023ರ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 31ರಂದು ನಡೆಯುವ ಸರ್ವಸಾಮಾನ್ಯ ಸಭೆಯಲ್ಲಿ ಅಧಿಕಾರ ಪದಗ್ರಹಣ ಮಾಡುವರು ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು