ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಶಾರ್ಟ್‌ ಸರ್ಕಿಟ್: ಕಬ್ಬಿನ ಗದ್ದೆಗೆ ಬೆಂಕಿ

Published 21 ನವೆಂಬರ್ 2023, 4:51 IST
Last Updated 21 ನವೆಂಬರ್ 2023, 4:51 IST
ಅಕ್ಷರ ಗಾತ್ರ

ಕಲಬುರಗಿ: ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಸೋಮವಾರ ವಿದ್ಯುತ್ ಶಾರ್ಟ್‌ ಸರ್ಕಿಟ್‌ನಿಂದ ಕಬ್ಬಿನ ಜಮೀನಿಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 3.5 ಎಕರೆ ಪ್ರದೇಶದಲ್ಲಿದ್ದ ಕಬ್ಬು ಸುಟ್ಟು ಕರಕಲಾಗಿದೆ.

ಗ್ರಾಮದ ರೈತ ಹಣಮಂತರಾಯ ಅವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದೆ. ಸುಮಾರು ₹ 2 ಲಕ್ಷ ನಷ್ಟ ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಡೆದರು. ಕಲಬುರಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT