ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಬೆಳವಣಿಗೆಗೆ ಎಂಜಿನಿಯರ್‌ಗಳ ಪಾತ್ರ ಮಹತ್ವದ್ದು: ಪ್ರೊ. ಬಿ. ಸತ್ಯನಾರಾಯಣ

ಕಲಬುರ್ಗಿಯ ವಿಟಿಯು ತಾಂತ್ರಿಕ ವಿ.ವಿ. ಪ್ರಾದೇಶಿಕ ಕೇಂದ್ರದಲ್ಲಿ ಎಂಜಿನಿಯರ್‌ಗಳ ದಿನಾಚರಣೆ
Last Updated 15 ಸೆಪ್ಟೆಂಬರ್ 2021, 11:51 IST
ಅಕ್ಷರ ಗಾತ್ರ

ಕಲಬುರ್ಗಿ: ‘ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಎಂಜಿನಿಯರ್‌ಗಳ ಪಾತ್ರ ಮಹತ್ವದ್ದಾಗಿದೆ. ವಿಶ್ವೇಶ್ವರಯ್ಯನವರು ಎಲ್ಲ ಎಂಜಿನಿಯರುಗಳಿಗೆ ಆದರ್ಶಪ್ರಾಯರಾಗಿದ್ದಾರೆ’ ಎಂದು ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿ.ವಿ. ಕುಲಪತಿ ಪ್ರೊ. ಬಿ. ಸತ್ಯನಾರಾಯಣ ಹೇಳಿದರು.

ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

‘ಯುವಕರು ದೇಶಾಭಿಮಾನ ಮತ್ತು ತಾಂತ್ರಿಕತೆಯ ಅವಶ್ಯಕತೆಗಳನ್ನು ಅರಿತುಕೊಂಡು ಅಧ್ಯಯನ ಶೀಲರಾಗಬೇಕು’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಶಂಭುಲಿಂಗಪ್ಪ ಅವರು, ವಿಶ್ವೇಶ್ವರಯ್ಯನವರ ಜೀವನದ ಘಟನೆಗಳು ಹಾಗೂ ಕೊಡುಗೆಗಳನ್ನು ಸವಿಸ್ತಾರವಾಗಿ ವಿವರಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಬಸವರಾಜ ಗಾದಗೆ, ಮಾನವತೆಯನ್ನು ರೂಢಿಸಿಕೊಳ್ಳಬೇಕಾದರೆ ಮೊದಲು ಕೊಡುವ ಗುಣವನ್ನು ಬೆಳೆಸಿಕೊಂಡು ಮಾನವತಾವಾದವನ್ನು ಸಾರಬೇಕು’ ಎಂದರು.

ರಕ್ತದಾನ ಮತ್ತು ನೇತ್ರದಾನದ ಅವಶ್ಯತೆಯನ್ನು ತಿಳಿಸಿ ದಾನ ಮಾಡಲು ಮುಂದೆ ಬರುವಂತೆ ಸಲಹೆ ನೀಡಿದರು.

ವಿಶೇಷ ಉಪನ್ಯಾಸ ನೀಡಿದ ನೇತ್ರ ತಜ್ಞೆ ಡಾ.ಸಂಗೀತಾ ಪಾಟೀಲ, ನೇತ್ರದಾನ ಹಾಗೂ ರಕ್ತದಾನದ ಮಹತ್ವವನ್ನು ತಿಳಿಸಿಕೊಟ್ಟರು.

ಅರುಣಕುಮಾರ ಲೋಯಾ ಮಾತನಾಡಿ, ಯುವ ಜನತೆಯಲ್ಲಿ ವಿಶ್ವೇಶ್ವರಯ್ಯನವರ ಗುಣಗಳ ಅಳವಡಿಕೆ ಅವಶ್ಯವಾಗಿದೆ’ ಎಂದರು.

ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಶಿವರಾಮನಗೌಡ ನಿರೂಪಿಸಿದರು. ಭಾರತೀಯ ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ವಂದನಾರ್ಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT