ಸೋಮವಾರ, ಮೇ 17, 2021
31 °C

ದೇಶದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನು, ಹಳೆ ದರದಲ್ಲೇ ವಿತರಣೆ: ಸದಾನಂದಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: 'ದೇಶದಲ್ಲಿ ಇನ್ನೂ ಒಂದೂವರೆ ತಿಂಗಳಿಗೆ ಸಾಲುವಷ್ಟು ಗೊಬ್ಬರ ದಾಸ್ತಾನು ಇದೆ. ಇದಕ್ಕೆ ಹೊಸ ದರ ಅನ್ವಯಿಸದೇ ಹಳೆ ದರದಲ್ಲೇ ರೈತರಿಗೆ ವಿತರಣೆ ಮಾಡಲಾಗುತ್ತದೆ' ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.

ದೇಶದ ಬಂದರು ಮತ್ತು ವಿವಿಧ ಕಂಪನಿಗಳ ಗೋದಾಮಿನಲ್ಲಿ ಗೊಬ್ಬರ ದಾಸ್ತಾನು ಮಾಡಲಾಗಿದೆ. ಬೆಲೆ ಏರಿಕೆ ಸಂಬಂಧ ಈಗಾಗಲೇ ಒಮ್ಮೆ ಸಭೆ ನಡೆಸಲಾಗಿದೆ. ಸೋಮವಾರ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. ಸಭೆ ಬಳಿಕ ರೈತರಿಗೆ ನಿರ್ದಿಷ್ಟ ಭರವಸೆ ನೀಡಲಾಗುವುದು ಎಂದು ಅವರು ನಗರದಲ್ಲಿ ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ನಾವು ಶೇ.90ರಷ್ಟು ಗೊಬ್ಬರವನ್ನು ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತೇವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೊಬ್ಬರ ಬೆಲೆ ಏರಿಕೆಯಾಗಿದೆ. ಡಿಎಪಿ ದರದಲ್ಲೇ ಶೇ.200-220ರಷ್ಟು ಹೆಚ್ಚಳವಾಗಿದೆ.  ಇದು ನಮ್ಮ ದೇಶದಲ್ಲಿ ಬೆಲೆ ಏರಿಕೆಗೂ ಕಾರಣವಾಗಿದೆ ಎಂದರು.

ರೈತರಿಗೆ ಅನುಕೂಲವಾಗುವಂತೆ ದೇಶದಲ್ಲಿ ದಾಸ್ತಾನು ಇರುವ ಗೊಬ್ಬರವನ್ನು ಹಳೆ ದರದಲ್ಲಿ ನೀಡಲಾಗುವುದು. ಅಮೆರಿಕ ಮತ್ತು ಯುರೋಪ್ ದೇಶಗಳಲ್ಲಿ ಈಗಾಗಲೇ ಕೃಷಿ ಚಟುವಟಿಕೆಗಳು ಮುಗಿದಿವೆ. ಅಲ್ಲಿ ಬೇಡಿಕೆ ಕಡಿಮೆ ಆಗುವ ನಿರೀಕ್ಷೆ ಇದೆ. ಹೀಗಾಗಿ ಕಡಿಮೆ ದರದಲ್ಲಿ ಸಿಗುವ ಗೊಬ್ಬರ ಆಮದು ಮಾಡಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು