ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಸರ ದಿನ ಧನಾತ್ಮಕ ಬದಲಾವಣೆಗೆ ಪ್ರೇರಣೆ’

Published 5 ಜೂನ್ 2023, 13:38 IST
Last Updated 5 ಜೂನ್ 2023, 13:38 IST
ಅಕ್ಷರ ಗಾತ್ರ

ಕಲಬುರಗಿ: ವಿಶ್ವ ಪರಿಸರ ದಿನವು ಜಾಗತಿಕ ಮಟ್ಟದಲ್ಲಿ ಧನಾತ್ಮಕ ಬದಲಾವಣೆ ಮತ್ತು ಮಾನವನ ಬೆಳವಣಿಗೆಗೆ ಪ್ರೇರಣೆಯನ್ನು ನೀಡಲಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ವಿ.ಟಿ. ಕಾಂಬಳೆ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲದ ದೈಹಿಕ ಶಿಕ್ಷಣ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಕುಸನೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗದ ಆವರಣದಲ್ಲಿ ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಸಂಕುಲದ ಆರೋಗ್ಯಕರ ಜೀವನ ಮುಂದುವರಿಕೆಗೆ ಪರಿಸರವೇ ಮೂಲವಾಗಿದ್ದು, ಅದರ ಉಳಿವು ಮತ್ತು ಸಂರಕ್ಷಣೆಗೆ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು.

ಕುಲಸಚಿವ ಡಾ. ಬಿ.ಶರಣಪ್ಪ ಮಾತನಾಡಿ, ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಪರಿಸರ ಸಂರಕ್ಷಣೆ, ಪರಿಸರ ಕಾಳಜಿ ಮತ್ತು ಪರಿಸರ ಜಾಗೃತಿ ಮೂಡಿಸುವ ಮಹತ್ವದ ಅಂಶಗಳನ್ನು ಅಳವಡಿಸಲಾಗಿದೆ. ಅದರಂತೆ ಪರಿಸರದ ಬಗೆಗಿನ ಪ್ರೀತಿ ಮತ್ತು ಪರಿಸರ ಸ್ನೇಹಿಯಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಯುವ ಸಮೂಹಕ್ಕೆ ಅರಿವು ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

‘ಮುಂದಿನ ದಿನಗಳಲ್ಲಿ ಕ್ಯಾಂಪಸ್ ಆವರಣದಲ್ಲಿ ಹಸಿರುವನ ನಿರ್ಮಾಣ ಮಾಡುವ ಮೂಲಕ ಪರಿಸರ ಉಳಿವಿಗೆ ಹೆಚ್ಚು ಒತ್ತು ನೀಡುವುದು ಅಗತ್ಯವಿದೆ’ ಎಂದರು.

ಕುಸನೂರು ಗ್ರಾಮ ಪಂಚಾಯಿತಿ ಅಧಿಕಾರಿ ಹೇಮಲತಾ ದೇಶಮುಖ ಮಾತನಾಡಿ, ‘ಪರಿಸರವೇ ಮನುಕುಲದ ಉಸಿರು ಎಂಬ ಆಶಯವನ್ನು ಯಶಸ್ವಿಗೊಳಿಸಲು ಎಲ್ಲರೂ ಎಲ್ಲೆಡೆ ಶ್ರಮಿಸಬೇಕು’ ಎಂದರು.

ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ. ಎನ್.ಜಿ. ಕಣ್ಣೂರು, ಗ್ರಾಪಂ ಅಧ್ಯಕ್ಷೆ ಸಂಗಮ್ಮ ಅಮೃತರಾವ್ ಪಾಟೀಲ, ಸದಸ್ಯರಾದ ರೂಪಾ ಶಿವಲಿಂಗ ಸಾವಳಗಿ, ಕುಪೇಂದ್ರ ಬರಗಾಲಿ, ಶಿವರಾಜ ಮಕ್ಕೊಂಡಿ, ರೇಷ್ಮಾ, ಶರಣು ಹಾಗರಗುಂಡಿಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT