ಶುಕ್ರವಾರ, ಜೂನ್ 18, 2021
23 °C

ಇಎಸ್‌ಐಸಿಯಲ್ಲಿ ಆಮ್ಲಜನಕ ಘಟಕ ನಿರ್ಮಾಣಕ್ಕೆ ಅನುಮೋದನೆ

‌ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಇಎಸ್‌ಐಸಿ ಆಸ್ಪತ್ರೆಯಲ್ಲಿ ತುರ್ತಾಗಿ ಆಮ್ಲಜನಕ ಘಟಕ ನಿರ್ಮಿಸಲು  ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೊರೊನಾ ಸೋಂಕಿತರಿಗೆ ಆಮ್ಲಜನಕದ ಕೊರತೆ ಉಂಟಾಗುತ್ತಿರುವುದನ್ನು ತಪ್ಪಿಸಲು ಈ ಪ್ಲ್ಯಾಂಟ್‌ ಕಾಮಗಾರಿಯನ್ನು ಶೀಘ್ರವೇ ಆರಂಭಸಿಬೇಕು. ಸಿವಿಲ್‌ ಮತ್ತು ವಿದ್ಯುತ್‌ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಮುಗಿಸಬೇಕು ಎಂದೂ ಸರ್ಕಾರದ ಆದೇಶದ ಪ್ರತಿಯಲ್ಲಿ ಸೂಚಿಸಲಾಗಿದೆ.

ಆಮ್ಲಜನಕದ ಕೊರತೆ ನೀಗಿಸುವ ಸಂಬಂಧ ರಾಜ್ಯದ ಜಿಲ್ಲಾ ಕೇಂದ್ರಗಳ 10 ಹಾಗೂ ತಾಲ್ಲೂಕು ಕೇಂದ್ರಗಳ 30 ಆಸ್ಪತ್ರೆಗಳು ಸೇರಿ ಒಟ್ಟು 40 ಆಸ್ಪತ್ರೆಗಳಲ್ಲಿ ಈ ಘಟಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ಇಎಸ್‌ಐಸಿ ಕೂಡ ಒಳಗೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು