ಕಲಬುರಗಿ: ಇತ್ತೀಚೆಗೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿಂದೆ ಎಲೆಕ್ಟ್ರಾನಿಕ್ ಮತಯಂತ್ರಗಳು ಹಾಗೂ ಆಡಳಿತ ಯಂತ್ರದ ದುರುಪಯೋಗ (ಮಷಿನ್ ಅಂಡ್ ಮಷಿನರಿ)ದ ಬಗ್ಗೆ ನನಗೆ ಈಗಲೂ ಸಂಶಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಕ್ಷಣವೇ ಫಲಿತಾಂಶ ಸಿಗಲಿ ಎಂಬ ಉದ್ದೇಶದಿಂದ ಇವಿಎಂ ಪರಿಚಯಿಸಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗ ವಿಳಂಬ ಮಾಡಿರುವುದು ಏಕೆ? ಎಷ್ಟೋ ಕ್ಷೇತ್ರಗಳಲ್ಲಿ ಮತದಾನವಾದ ಪ್ರಮಾಣಕ್ಕಿಂತಲೂ ಹೆಚ್ಚು ಮತಗಳು ದಾಖಲಾಗಿದ್ದವು. ಇದರ ಬಗ್ಗೆ ಒಂದು ತನಿಖೆ ನಡೆಯುವುದು ಬೇಡವೇ’ ಎಂದು ಪ್ರಶ್ನಿಸಿದ ಪ್ರಿಯಾಂಕ್, ಈ ಕುರಿತು ನಾನೇ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದ್ದೇನೆ ಎಂದರು.

‘ಡಿ 9ರಿಂದ ನಡೆಯಲಿರುವ ಅಧಿವೇಶನದಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಲಿವೆ. ರೈತರ ಸಮಸ್ಯೆಗಳು, ಕಬ್ಬಿನ ಬೆಲೆ ನಿಗದಿ ಸೇರಿದಂತೆ ಯಾವುದೇ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ತಯಾರಾಗಿದೆ. ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ನಡೆದಿದ್ದು, ರಾಜ್ಯ ಅಧ್ಯಕ್ಷರನ್ನು ಉಚ್ಚಾಟಿಸಲು ಮತ್ತೊಂದು ಬಣ ಪಟ್ಟು ಹಿಡಿದಿದೆ’ ಎಂದು ಹೇಳಿದರು.

‘ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಹಾಗೂ ಸರ್ಕಾರದ ಸಚಿವರು ಭಾಗವಹಿಸುವ ಉದ್ದೇಶದಿಂದ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ತಮ್ಮ ಪಕ್ಷದ ಅಧ್ಯಕ್ಷರು ರಾಜ್ಯಕ್ಕೆ ಬರುವ ಕಾರಣಕ್ಕಾಗಿ ಮೂರು ದಿನ ಕಡಿತ ಮಾಡಿದ್ದರು’ ಎಂದು ಟೀಕಿಸಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅಗತ್ಯ ಅನುಮತಿಗಳನ್ನು ಪಡೆಯದೇ ಇರುವುದಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಚಿಂಚೋಳಿಯಲ್ಲಿರುವ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ ನೀಡಿದೆ. ಪ್ರಕರಣ ಈಗ ಸುಪ್ರೀಂಕೋರ್ಟ್ನಲ್ಲಿದ್ದು, ಅನುಮತಿ ಪಡೆಯದೇ ಕಾರ್ಖಾನೆ ನಡೆಸಲು ಅವಕಾಶ ನೀಡುವುದಾದರೂ ಹೇಗೆ? ಅಲ್ಲಿ ನುರಿಸಬೇಕಾಗಿದ್ದ ಕಬ್ಬನ್ನು ಬೇರೆಡೆ ಹಂಚಿಕೆ ಮಾಡಲಾಗಿದೆ. ಯತ್ನಾಳ್ ಆರೋಪದಲ್ಲಿ ಹುರುಳಿಲ್ಲ ಎಂದರು.

‘ಯತ್ನಾಳ್ರಿಂದ ಕ್ಷಮಿಸಲಾಗದ ತಪ್ಪು’

ಬಸವಣ್ಣ ಹೊಳೆ ಹಾರಿದರು ಎಂದು ಅವಮಾನಿಸುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕ್ಷಮಿಸಲಾಗದ ತಪ್ಪೆಸಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ. ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು?ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ? ವಚನ ಭಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

‘ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.