ಮಂಗಳವಾರ, ಜನವರಿ 21, 2020
20 °C

‘ಗ್ರಾ.ಪಂ.ಗಳ ಅಧಿಕಾರ ಮೊಟಕು: ಪ್ರಜಾಪ್ರಭುತ್ವ ವಿರೋಧಿ ಕ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಸಂಸ್ಥೆಗಳ ಅಧಿಕಾರವನ್ನು ಮೊಟಕುಗೊಳಿಸುವ ನಿರ್ಧಾರ ಕೈಗೊಂಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ಈ ನಿಲುವನ್ನು ಪ್ರಜ್ಞಾವಂತ ನಾಗರಿಕರು ವಿರೋಧಿಸಬೇಕು. ಅಧಿಕಾರ ವಿಕೇಂದ್ರಿಕರಣದ ಮೂಲ ಆಶಯಗಳೊಂದಿಗೆ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಅಧಿಕಾರವನ್ನು ಮೊಟಕುಗೊಳಿಸುವುದು ಸರಿಯಲ್ಲ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಆಯ್ಕೆಯಾಗುತ್ತಾರೆ. ಸರ್ಕಾರದ ಈ ನಿರ್ಧಾರದಿಂದ ಮಹಿಳೆಯರಿಗೂ ಹಿನ್ನಡೆ ಆಗಲಿದೆ. ಇದು ಮಹಿಳಾ ವಿರೋಧಿ ನೀತಿ‘ ಎಂದಿದ್ದಾರೆ.

ಪಂಚಾಯಿತಿ ಅಧಿಕಾರಕ್ಕೆ ತಡೆ ನೀಡುವಂತಹ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಕ್ರಿಯಿಸಿ (+)