ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಸಿದ ನೋಂದಣಿ ಪ್ರಮಾಣ’

Last Updated 26 ಡಿಸೆಂಬರ್ 2019, 13:24 IST
ಅಕ್ಷರ ಗಾತ್ರ

ಕಲಬುರ್ಗಿ: 2014ಕ್ಕೆ ಹೋಲಿಸಿದರೆ 2019ರಲ್ಲಿ ನೋಂದಣಿ ಮಾಡಿಸಿಕೊಂಡ ಈಶಾನ್ಯ ಮತಕ್ಷೇತ್ರದ ಶಿಕ್ಷಕರು, ಉಪನ್ಯಾಸಕರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ಜಿ.ನಮೋಶಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಣ್ಣ ಗೊಂದಲ ಹಾಗೂ ಕೆಳಹಂತದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೋಂದಣಿ ಪ್ರಮಾಣ ಬಹಳ ಕಡಿಮೆಯಾಗಿದೆ. 2014ರಲ್ಲಿ ಒಟ್ಟು 31,635 ಮತದಾರರು ನೋಂದಣಿ ಮಾಡಿಸಿಕೊಂಡಿದ್ದರು. ಆದರೆ ಈ ಬಾರಿ 20,756 ಮತದಾರರು ಮಾತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಮತದಾರರ ನೋಂದಣಿಗೆ ಕೊನೆಯ ದಿನ ಡಿ.23 ಆಗಿದ್ದರೂ, ಜ.10ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಗೊಳ್ಳುತ್ತದೆ. ಹೀಗಾಗಿ ಜ.10ರವರೆಗೂ ಮತದಾರರು ನೋಂದಣಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT