ಭಾನುವಾರ, ನವೆಂಬರ್ 28, 2021
19 °C

ಮೋದಿಯವರದು ಬಾಯಿ ಮಾತಿನ ದಲಿತ ಪ್ರೀತಿ: ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿಯನ್ನು ಮಾಡಿಲ್ಲ. ಆದರೆ ನಾವು ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಮೋದಿಯದ್ದು ಬರಿ ಬಾಯಿ ಮಾತಿನ ದಲಿತ ಪ್ರೀತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಆರೋಪಿಸಿದರು.

ಸಿಂದಗಿ ‌ಉಪಚುನಾವಣೆ ಪ್ರಚಾರಕ್ಕೆ ತೆರಳಲು‌ ನಗರದ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ತೈಲ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದರೆ ಜನರನ್ನು ಹೇಗೆ ಲೂಟಿ ಮಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದರು.

ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು ಎಂದು ಹೇಳಿದರು.

ತಮ್ಮನ್ನು ರಾಜ್ಯ ಉಸ್ತುವಾರಿಯಿಂದ ಬದಲಾಯಿಸುವಂತೆ ರಾಜ್ಯದ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ. ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮುಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯವನ್ನು ತಿಳಿಸುವುದರಲ್ಲಿ ತಪ್ಪೇನಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು