ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಂ: ನಕಲಿ ಪಿಸ್ತೂಲ್ ಪ್ರದರ್ಶಿಸಿದ ಇಬ್ಬರ ವಿರುದ್ಧ ಪ್ರಕರಣ

Published 29 ಮಾರ್ಚ್ 2024, 15:23 IST
Last Updated 29 ಮಾರ್ಚ್ 2024, 15:23 IST
ಅಕ್ಷರ ಗಾತ್ರ

ಸೇಡಂ: ನಕಲಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹರಿಬಿಟ್ಟ ಇಬ್ಬರು ಯುವಕರ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟಣದ ಇಂದಿರಾನಗರ ನಿವಾಸಿಗಳಾದ ಮಹೇಶ ಕಾಶಿನಾಥ ಮತ್ತು ಬಸವರಾಜ ಜಗನ್ನಾಥ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಕಲಿ ಪಿಸ್ತೂಲ್ ಪ್ರದರ್ಶಿಸಿ ಸಮಾಜದಲ್ಲಿ ಶಾಂತಿ ಕದಡಿಸುವ ಪ್ರಯತ್ನವನ್ನು ಮಾಡಿರುವ ಅಂಶ ಬೆಳಕಿಗೆ ಬಂದಿದೆ.  ಇದರ ಕುರಿತು ಭಾವಚಿತ್ರಗಳನ್ನು ಗಮನಿಸಿದಾಗ ಸೇಡಂ ಪಟ್ಟಣದವರಾಗಿದ್ದಾರೆ.

ನಕಲಿ ಪಿಸ್ತೂಲ್ ಜತೆಗೆ ಮಾರಾಕಾಸ್ತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ, ಶಾಂತಿ ಕದಡಿಸುವ ಪ್ರಯತ್ನ ಮಾಡಿರುವುದು ಕಂಡು ಬಂದಿದ್ದು, ಇದಕ್ಕೆ ಸಾರ್ವಜನಿಕರಿಂದಲೂ ಆಕ್ಷೇಪಗಳು ಕೇಳಿ ಬಂದಿವೆ. ಹೀಗಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್ಐ ತಿರುಮಲೇಶ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT