ಕಲಬುರಗಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ 1 ಮತ್ತು 2ನೇ ತರಗತಿಯ ವಿದ್ಯಾರ್ಥಿಗಳಿಂದ ಆಲಂಕಾರಿಕ ಉಡುಪುಗಳ ಧರಿಸುವ ಕಾರ್ಯಕ್ರಮ ನಡೆಯಿತು.
ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ, ಸೈನಿಕರು ಮತ್ತು ರೈತರು ಹೀಗೆ ಭಾರತದ ಪರಂಪರೆ ಬಿಂಬಿಸುವ ಉಡುಪುಗಳನ್ನು ಧರಿಸಿ ಅವರ ಕೆಲವು ಡೈಲಾಗ್ ಹೇಳಿ ಗಮನ ಸೆಳೆದರು.
ಹಲವು ಪಾಲಕರು ಮಕ್ಕಳು ನಡೆಸುವ ಕಾರ್ಯಕ್ರಮ ವೀಕ್ಷಿಸಿದರು. ಮಕ್ಕಳ ಅಭಿನಯ, ವಾಕ್‌ಚಾತುರ್ಯ ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದರು.
ಮಕ್ಕಳ ಪ್ರಯತ್ನಕ್ಕೆ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ, ಶರಣ ಬಸವೇಶ್ವರ ವಿದ್ಯಾವರ್ಧ ಸಂಘದ ಚೇರ್‌ಪರ್ಸನ್ ದಾಕ್ಷಯಣಿ ಎಸ್. ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರಾಚಾರ್ಯ ಎನ್.ಎಸ್.ದೇವರಕಲ್ ಮೆಚ್ಚುಗೆ ವ್ಯಕ್ತಪಡಿಸಿದರು.