ಸೋಮವಾರ, ಅಕ್ಟೋಬರ್ 26, 2020
28 °C
ಒಂದು ವರ್ಷದಿಂದ ತಹಶೀಲ್ದಾರ್ ಕಚೇರಿಗೆ ಎಡತಾಕುತ್ತಿರುವ ಕುಟುಂಬ

ರೈತ ಆತ್ಮಹತ್ಯೆ; ಸಿಗದ ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಬೀರನಕಲ್ ತಾಂಡಾದಲ್ಲಿ ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಬಾಬು ನಾಯಕ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಪರಿಹಾರ ಸಿಕ್ಕಿಲ್ಲ.

ಬಾಬು ಅವರ ಪತ್ನಿ ರೇಣುಕಾ ಮಾತನಾಡಿ, ‘ಸಾಲಭಾದೆಯಿಂದ ಪತಿ ಆತ್ಮಹತ್ಯೆ ಮಾಡಿಕೊಂಡು ಒಂದು ವರ್ಷ ಕಳೆದಿದೆ. ನಮ್ಮ ಕುಟುಂಬಕ್ಕೆ ಅವರೇ ಆಧಾರ ಸ್ತಂಭವಾಗಿದ್ದರು. ಆರ್ಥಿಕ ಸಂಕಷ್ಟದಿಂದ ಇಬ್ಬರು ಮಕ್ಕಳು ಮತ್ತು ಅತ್ತೆ ಮಾವನನ್ನು ನೋಡಿಕೊಳ್ಳುವುದು ದುಸ್ತರವಾಗಿದೆ’ ಎಂದು ತಿಳಿಸಿದರು.

‘ಲಾಕ್‌ಡೌನ್ ಸಮಯದಲ್ಲಿ ನಮ್ಮ ಕುಟುಂಬ ತೀವ್ರ ಸಂಕಷ್ಟ ಅನುಭವಿಸಿತು. ಇಲ್ಲಿಯವರೆಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಮನೆಗೆ ಭೇಟಿ ಕೊಟ್ಟಿಲ್ಲ. ಸಂಬಂಧಿಸಿದ ಅಧಿಕಾರಿಗಳು ಪರಿಹಾರದ ಹಣವನ್ನು ನೀಡಬೇಕು’ ಎಂದು ಅವರು ಮನವಿ ಮಾಡಿದರು.

‘ಮಗನನ್ನು ಕಳೆದುಕೊಂಡ ನಾವು ಅನಾಥರಾಗಿದ್ದೇವೆ. ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ವ್ಯವಸಾಯಕ್ಕಾಗಿ ಮಾಡಿದ ಸಾಲ ಹೇಗೆ ತೀರಿಸಬೇಕು ಎಂದು ಗೊತ್ತಾಗುತ್ತಿಲ್ಲ’ ಎಂದು ಬಾಬು ಅವರ ತಾಯಿ ಕಣ್ಣೀರಾದರು.

‘ಪರಿಹಾರ ನೀಡುವಂತೆ ತಹಶೀಲ್ದಾರ್ ಕಚೇರಿಗೆ ಹಲವು ಬಾರಿ ಭೇಟಿ ಕೊಟ್ಟು ಮನವಿ ಸಲ್ಲಿಸಿದ್ದೇವೆ. ಆದರೆ ಪರಿಹಾರದ ಹಣ ನೀಡಲು ಅನುದಾನ ಇಲ್ಲ ಎಂದು ನೆಪವೊಡ್ಡಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ರೇಣುಕಾ ಅವರ ಚಿಕ್ಕ‍ಪ್ಪ ದೇವಪ್ಪ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದರು. 

ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ವರದಿ ಮಾಡಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ವಿಳಂಬ ಮಾಡದೆ ಮೃತ ರೈತನ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥ ಮನೋಜ್ ರಾಥೋಡ ಮನವಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.